ಮನೆ ರಾಜ್ಯ ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸಿದ ಪ್ರಧಾನಿ ಮೋದಿ

ಕೆ.ಎಸ್.ಈಶ್ವರಪ್ಪ ಅವರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸಿದ ಪ್ರಧಾನಿ ಮೋದಿ

0

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಮುಂಜಾನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪರಿ ವಿಚಾರಿಸಿದ್ದಾರೆ.

Join Our Whatsapp Group

ಕೆ ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳಲು ಪಕ್ಷ ಸೂಚಿಸುತ್ತಿದ್ದಂತೆ ಪಕ್ಷದ ಆದೇಶವನ್ನು ಈಶ್ವರಪ್ಪ ಪಾಲನೆ ಮಾಡಿದ್ದರು. ರಾಜಕೀಯ ನಿವೃತ್ತಿ ಘೋಷಣೆ ಮಾಡಿದರು. ಈ ಬಾರಿ ಶಿವಮೊಗ್ಗ ನಗರ ಕ್ಷೇತ್ರದಿಂದ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಬಯಸಿದ್ದರು. ಆದರೆ ಪುತ್ರನಿಗೆ ಟಿಕೆಟ್ ಸಿಗಲಿಲ್ಲ.

ಹೀಗಾಗಿ ಈಶ್ವರಪ್ಪ ಅಸಮಾಧಾನಗೊಳ್ಳಬಹುದು ಎಂಬ ಭಾವನೆ ಎಲ್ಲರಲ್ಲಿತ್ತು. ಆದರೆ ಈಶ್ವರಪ್ಪ ಇದು ಯಾವುದಕ್ಕು ತಲೆ ಕೆಡಿಸಿಕೊಳ್ಳದೇ ಪಕ್ಷ ನಿಷ್ಠೆ ಮೆರೆದಿದ್ದು,ಈಶ್ವರಪ್ಪ ಅವರ ಪಕ್ಷ ನಿಷ್ಠೆ ಮೆಚ್ಚಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದರು.

ಈ ವೇಳೆ ಶಿವಮೊಗ್ಗ ವಿಧಾನಸಭಾ ಚುನಾವಣೆಯ ಬಗ್ಗೆ ಚರ್ಚೆ ನಡೆಸಿದ್ದು, ಈ ವೇಳೆ ಈಶ್ವರಪ್ಪ ಮಾತನಾಡಿ, ಸಾಮಾನ್ಯ ಕಾರ್ಯಕರ್ತರೊಂದಿಗೆ ಈ ರೀತಿ ಮಾತನಾಡುತ್ತಿರುವುದು ಸಂತೋಷ ತಂದಿದೆ. ಸಂಘಟನೆ ಹಾಗೂ ನಿಮ್ಮನೊಂದಿಗೆ ಸದಾ ನಾನು ಇರುತ್ತೇನೆ ಎಂದು ಈಶ್ವರಪ್ಪ ತಿಳಿಸಿದರು.

ನೀವು ಬಿ.ಎಸ್ ಯಡಿಯೂರಪ್ಪ ಪಕ್ಷಕ್ಕಾಗಿ ಕೆಲಸ ಮಾಡಿದ್ದೀರಿ. ಪಕ್ಷ ಸಂಘಟನೆ ನಿಮ್ಮ ಜೊತೆ ಯಾವಾಗಲೂ ಇರುತ್ತದೆ ಎಂದು ಮೋದಿ ತಿಳಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನೀವು ಪೋನ್ ಮಾಡಿದ್ದು ಖುಷಿ ಆಯ್ತು. ಶಿವಮೊಗ್ಗದಲ್ಲಿ ನಾವು ಗೆಲ್ಲುತ್ತೇವೆ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ನೀವು ಕರೆ ಮಾಡಿದ್ದು ಬಹಳ ಖುಷಿ ಆಗಿದೆ ಎಂದರು.