ಮನೆ ಸುದ್ದಿ ಜಾಲ ಚಾಮರಾಜನಗರ: ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

0

ಚಾಮರಾಜನಗರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

Join Our Whatsapp Group

ನಗರದ ಜೆಎಸ್ ಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ (18) ಮೃತಳು.

ಪಿಸಿಎಂಸಿ ವಿಷಯ ತೆಗೆದುಕೊಂಡಿದ್ದ ಈ ವಿದ್ಯಾರ್ಥಿನಿ ಫಲಿತಾಂಶದಲ್ಲಿ ಫೇಲಾದ ವಿಷಯ ತಿಳಿದು, ನಗರದ ಜೆಎಸ್ ಎಸ್ ಹಾಸ್ಟೆಲ್ ನ ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈಕೆ ಗುಂಡ್ಲುಪೇಟೆ ತಾಲೂಕಿನ ಮೂಡುಗೂರು ಗ್ರಾಮದ ಮಹೇಶ್ ಎಂಬುವರ ಪುತ್ರಿ.

ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.