ಮನೆ ರಾಜ್ಯ ಲಿಂಗಾಯತ ಸಮುದಾಯ ನಿಂದಿಸಿದ ಆರೋಪ: ಸಿದ್ದರಾಮಯ್ಯ ವಿರುದ್ಧ ದೂರು

ಲಿಂಗಾಯತ ಸಮುದಾಯ ನಿಂದಿಸಿದ ಆರೋಪ: ಸಿದ್ದರಾಮಯ್ಯ ವಿರುದ್ಧ ದೂರು

0

ಬೆಂಗಳೂರು: ಲಿಂಗಾಯತ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಲಾಗಿದೆ.

Join Our Whatsapp Group

ಲಿಂಗಾಯತ ಸಿಎಂ ಕುರಿತಾದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಲಿಂಗಾಯತ ಯುವ ವೇದಿಕೆಯ ಕಾನೂನು ಘಟಕ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ವಹಿಸಲು ಮನವಿ ಮಾಡಿದೆ.

ಸಿದ್ದರಾಮಯ್ಯ ಹೇಳಿಕೆಗೆ ಲಿಂಗಾಯತ ಸಮುದಾಯದ ಸ್ವಾಮಿಜಿಗಳು ಆಕ್ಷೇಪಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸಮುದಾಯ ನಿಂದಿಸಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನೂ ಎಲೆಕ್ಷನ್ ಸಮಯದಲ್ಲಿ ರಾಜಕೀಯ ನಾಯಕರು ಯಾವುದೇ ನಿರ್ದಿಷ್ಟ ಸಮುದಾಯ, ಧರ್ಮವನ್ನು ನಿಂದಿಸುವ ಹಾಗಿಲ್ಲ ಎಂದು ಚುನಾವಣಾ ಆಯೋಗ ಮಾರ್ಗಸೂಚಿ ಹೊರಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಹೇಳಿಕೆ ನೀಡಿದ್ದರು. ಇದು ಲಿಂಗಾಯತ ಸಮುದಾಯದ ವಿರುದ್ಧದ ದ್ವೇಷದ ಹೇಳಿಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿದ್ದರಾಮಯ್ಯ ಹೇಳಿಕೆ ಲಿಂಗಾಯತ ಸಮುದಾಯದ ವ್ಯಕ್ತಿಯ ಭಾವನೆಗೆ ಹಾನಿ ಉಂಟಾಗಿದೆ, ಬೊಮ್ಮಾಯಿ, ಬಿಎಸ್‌’ವೈ ರಾಜ್ಯಕ್ಕೆ ಉತ್ತಮ ಕೆಲಸ ಮಾಡಿದ್ದಾರೆ. ಯಾವುದೇ ಸಮುದಾಯದ ಮಾನಹಾನಿ ಮಾಡಲು ಅಧಿಕಾರ ಇಲ್ಲ, ಹೀಗಾಗಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ಧ ಸೂಕ್ತ ಕ್ರಮ ವಹಿಸಲು ದೂರಿನಲ್ಲಿ ತಿಳಿಸಲಾಗಿದೆ.