ಮನೆ ರಾಷ್ಟ್ರೀಯ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ: ಪ್ರಕರಣ ದಾಖಲು

0

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಬಂದಿದ್ದು, ಪ್ರಕರಣ ದಾಖಲಾಗಿದೆ.

Join Our Whatsapp Group

ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್ ಗೆ  ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದು, ಸಂಚಲನ ಮೂಡಿಸಿದೆ.

ಈ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಯೋಗಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ.

ಏಪ್ರಿಲ್ 26 ಮತ್ತು 30 ಮತ್ತು ಮೇ 6 ಮತ್ತು 7 ರಂದು ಸಾರ್ವಜನಿಕ ಸಭೆಗಳಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ.