ದೆಹಲಿ: ಒಂದು ವರ್ಷಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಹೋರಾಟಕ್ಕೆ ದೊಡ್ಡ ಬಲ ಸಿಕ್ಕಿದೆ. ಇದೀಗ ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ.
ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ವಿಷಯಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್’ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.
ಇದರ ಜತೆಗೆ ವಿನೇಶ್ ಫೋಗಟ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳು ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಎಫ್’ಐಆರ್ ದಾಖಲಿಸುವಂತೆ ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದರು, ಇದೀಗ ಈ ವಿಚಾರವಾಗಿ ಈ ಆರೋಪಗಳನ್ನು “ಗಂಭೀರ” ವಿಚಾರ ಎಂದು ಸುಪ್ರೀಂ ಕೋರ್ಟ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
ಇದೆ ಶುಕ್ರವಾರ (ಏ.28) ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.