ಮನೆ ಅಪರಾಧ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಸವಾರ ಸಾವು

0

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡದೆ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಾಯಂಡಹಳ್ಳಿ ಜಂಕ್ಷನ್​ನಲ್ಲಿ ನಡೆದಿದೆ.

Join Our Whatsapp Group

ಟಿವಿಎಸ್ ಎಕ್ಸ್​’ಎಲ್ ಸ್ಕೂಟರಿನಲ್ಲಿ ಬರುತ್ತಿದ್ದ ಇಬ್ಬರು ಯುವಕರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.

ಈ ವೇಳೆ ಲಾರಿ ಕೆಳಗೆ ಸಿಲುಕಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯ‌ಗಳಾಗಿವೆ. ಮೃತನ ವಿವರ ಇನ್ನೂ ಲಭ್ಯವಾಗಿಲ್ಲ.

ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದು, ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.