ಮನೆ ಹವಮಾನ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಮಳೆ: ಹವಮಾನ ಇಲಾಖೆ

ಬೆಂಗಳೂರಿನಲ್ಲಿ ಮುಂದಿನ ಐದು ದಿನ ಮಳೆ: ಹವಮಾನ ಇಲಾಖೆ

0

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ತಿಳಿಸಿದೆ.

Join Our Whatsapp Group

ದಕ್ಷಿಣ ತಮಿಳುನಾಡಿನಲ್ಲಿ ಸಮುದ್ರ ಮಟ್ಟದಿಂದ ಸುಮಾರು 900 ಮೀ ಎತ್ತರದ ಮೇಲಿನ ಚಂಡಮಾರುತದ ಪರಿಚಲನೆಯಿಂದಾಗಿ ಕರ್ನಾಟಕದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಬೆಂಗಳೂರಿನ ಹವಾಮಾನ ಇಲಾಖೆ ಪ್ರಭಾರಿ ನಿರ್ದೇಶಕ ಎ ಪ್ರಸಾದ್ ಹೇಳಿದ್ದಾರೆ.

ಮುಂದಿನ ಎರಡು ದಿನಗಳ ಕಾಲ ಒಣ ಹವೆ ಇರಲಿದೆ. ನಂತರ ಏಪ್ರಿಲ್ 26, 27, ಮತ್ತು 28 ರಂದು ಕರಾವಳಿ ಕರ್ನಾಟಕದ ಎರಡು ಸ್ಥಳಗಳಲ್ಲಿ ಒಂದರಲ್ಲಿ ಸಾಧಾರಣ ಮಳೆಯಾಗಬಹುದು. ಕರ್ನಾಟಕದ ಒಳಭಾಗದಲ್ಲಿ ಏಪ್ರಿಲ್ 27 ಮತ್ತು 28 ರಂದು ತಡರಾತ್ರಿ ಮಳೆ ಗುಡುಗು ಸಹಿತ ಮಳೆಯಾಗಬಹುದು ಎಂದು ಅವರು ತಿಳಿಸಿದ್ದಾರೆ.

ಹಾಗೆಯೇ, ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 25 ರಿಂದ 28 ರವರೆಗೆ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಪ್ರಸಾದ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.