ಮನೆ ರಾಜ್ಯ ವಿಧಾನಸಭಾ ಚುನಾವಣೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜನಾಥ್​ ಸಿಂಗ್, ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್...

ವಿಧಾನಸಭಾ ಚುನಾವಣೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜನಾಥ್​ ಸಿಂಗ್, ನಿರ್ಮಲಾ ಸೀತಾರಾಮನ್, ಶಿವರಾಜ್ ಸಿಂಗ್ ಚೌಹಾಣ್, ದೇವೇಂದ್ರ ಫಡ್ನವಿಸ್ ರಾಜ್ಯ ಪ್ರವಾಸ

0

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಮುಖ ಮೂರು ಪ್ರಕ್ಷಗಳಿಂದ ಪ್ರಚಾರ ಜೋರಾಗಿಯೇ ನಡೆದಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್​ ಹೈಕಮಾಂಡ್​ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ರಾಜ್ಯ ಆಗಮಿಸುತ್ತಿದ್ದಾರೆ.

Join Our Whatsapp Group

ಈ ನಡುವೆ ಇಂದು (ಏ.25) ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ.

ಬೆಳಗ್ಗೆ ಲಖನೌನಿಂದ ಮೈಸೂರಿಗೆ ಆಗಮಿಸುವ ಸಿಎಂ ಯೋಗಿ ಆದಿತ್ಯನಾಥ್​​ ಅವರು, 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 2.40ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬಸವೇಶ್ವರರ ದರ್ಶನ ಪಡೆದು ಮಧ್ಯಾಹ್ನ 3.05ಕ್ಕೆ ಬಸವನಬಾಗೇವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್​​.ಕೆ.ಬೆಳ್ಳುಬ್ಬಿ ಪರ ಪ್ರಚಾರ ಮಾಡಲಿದ್ದಾರೆ.

ಇದಾದ ನಂತರ ಸಂಜೆ 4.50ಕ್ಕೆ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಂಡು ಇಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ್ ಪರ ಮತಯಾಚಿಸಲಿದ್ದಾರೆ. ಸಮಾವೇಶ ಮುಗಿದ ಬಳಿಕ ಉತ್ತರ ಪ್ರದೇಶದ ಲಖನೌಗೆ ನಿರ್ಗಮಿಸುತ್ತಾರೆ.

ರಕ್ಷಣಾ ಸಚಿವ ರಾಜನಾಥ್​ ಸಿಂಗ್ ರಾಜ್ಯ ಪ್ರವಾಸ

ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಇಂದು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರಚಾರ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಬೆಳಗಾವಿ ಜಿಲ್ಲೆಯ ಕಾಗವಾಡದ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಿ, ನಮತರ ಮಧ್ಯಾಹ್ನ 1.15ಕ್ಕೆ ಬೈಲಹೊಂಗಲದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಬಳಿಕ ಸಂಜೆ 4 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆಯುವ ಸಮಾವೇಶದಲ್ಲಿ ಮತಯಾಚನೆ ಮಾಡಲಿದ್ದಾರೆ.

ಕಲಬುರಗಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

ಇಂದು ಕಲಬುರಗಿ ಜಿಲ್ಲೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ 11 ಗಂಟೆಗೆ ಕಲಬುರಗಿಯಲ್ಲಿ ಪ್ರಬುದ್ಧರ ಜೊತೆ ಸಂವಾದ ನಡೆಸಲಿದ್ದಾರೆ.

ಬಳಿಕ 3 ಗಂಟೆಗೆ ಅಳಂದದಲ್ಲಿ ನಡೆಯುವ ಮಹಿಳಾ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ. ಆ ಬಳಿಕ ಸಂಜೆ 4 ಗಂಟೆಗೆ ಕಲಬುರಗಿ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಲಿದ್ದಾರೆ.

ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಚುನಾವಣಾ ಪ್ರಚಾರ

ರಾಜ್ಯದಲ್ಲಿ ಇಂದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ದುಮುಖಲಿಸರುವ ಇವರು, ಬೆಳಗ್ಗೆ 11.30ಕ್ಕೆ ಹುಕ್ಕೇರಿಯಲ್ಲಿನ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ. ಮಧ್ಯಾಹ್ನ 2.30ಕ್ಕೆ ಗೋಕಾಕ್​ನಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ, ಸಂಜೆ 4 ಗಂಟೆಗೆ ರಾಮದುರ್ಗದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗುತ್ತಾರೆ.

ವಿಜಯಪುರದಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರಚಾರ

ಇಂದು ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್​ ಪ್ರಚಾರ ನಡೆಸಲಿದ್ದಾರೆ. ಸಿದ್ದೇಶ್ವರ ಆಶ್ರಮಕ್ಕೆ ಭೇಟಿ ನೀಡಿ, ನಂತರ ಬೆಳಗ್ಗೆ 11 ಗಂಟೆಗೆ ವಿಜಯಪುರ ಬಿಜೆಪಿ ಕಚೇರಿಯಲ್ಲಿ ದೇವೇಂದ್ರ ಫಡ್ನವಿಸ್​ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಕನಮಡಿ ಧರಿದೇವರ ದೇವಸ್ಥಾನಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬಬಲೇಶ್ವರದಲ್ಲಿ ದೇವೇಂದ್ರ ಫಡ್ನವಿಸ್ ಪ್ರಚಾರ ಸಭೆ ನಡೆಸಲಿದ್ದಾರೆ.