ಮನೆ ಆರೋಗ್ಯ ದೇಶದಲ್ಲಿ 1938 ಹೊಸ ಕೋವಿಡ್ ಪ್ರಕರಣ ಪತ್ತೆ

ದೇಶದಲ್ಲಿ 1938 ಹೊಸ ಕೋವಿಡ್ ಪ್ರಕರಣ ಪತ್ತೆ

0

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,938 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 67 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ಪ್ರಕರಣಗಳಲ್ಲಿ ಅಲ್ಪ ಏರಿಕೆಯಾಗಿದ್ದು ನಿನ್ನೆ 1,778 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 4,30,15,087ಕ್ಕೆ ಏರಿಕೆಯಾಗಿದೆ.

ಇದೇ ವೇಳೆ 2,531 ಜನರು ಚೇತರಿಸಿಕೊಂಡಿದ್ದು, ಸದ್ಯ 22,427 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೂ ದೇಶದಲ್ಲಿ 5,16,672 ಜನರು ಕೋವಿಡ್‌ನಿಂದ ಪ್ರಾಣಕಳೆದುಕೊಂಡಿದ್ದಾರೆ.ಕೋವಿಡ್ ಚೇತರಿಕೆ ಪ್ರಮಾಣ ಶೇ 98.75ರಷ್ಟಿದೆ. ಮರಣ ಪ್ರಮಾಣ ಶೇ 1.20ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.