ಬೆಂಗಳೂರು: ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.
2012ರ ಜನವರಿ 1ರಿಂದ 2019ರ ಆಗಸ್ಟ್ 14 ರವರೆಗೆ ಅಕ್ರಮವಾಗಿ ಸಂಪತ್ತು ಗಳಿಸಿದ ಆರೋಪದ ಮೇಲೆ ಆರೋಪಿ ಎಂಎಚ್ ತಂಗಳ್ ವಿರುದ್ಧ ಸಿಬಿಐ 2019ರ ಆಗಸ್ಟ್ 13ರಂದು ಪ್ರಕರಣ ದಾಖಲಿಸಿದೆ.
ಸಿಬಿಐ ವಿಶೇಷ ನ್ಯಾಯಾಧೀಶರಾದ ಇ ಚಂದ್ರಕಲಾ ಅವರು ತಂಗಳ್ ಅವರ ಪತ್ನಿಗೂ ಮೂರು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಸಿಬಿಐ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ.
ತಂಗಳ್ ಅವರು ಸುಮಾರು 3.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. ಆದರೆ, ಇದು ಆದಾಯದ ಮೂಲಗಳಿಗಿಂತ ಶೇ 103 ರಷ್ಟು ಹೆಚ್ಚಿದೆ.
ತನಿಖೆಯ ನಂತರ, ತಂಗಳ್ ಮತ್ತು ಅವರ ಪತ್ನಿ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಯಿತು. ವಿಚಾರಣಾ ನ್ಯಾಯಾಲಯ ಇಬ್ಬರೂ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.