ಮನೆ ರಾಜ್ಯ ಏನೇ ಪ್ರಯತ್ನಪಟ್ಟರು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ರಾಜೀವ್ ಬಬ್ಬರ್

ಏನೇ ಪ್ರಯತ್ನಪಟ್ಟರು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ: ರಾಜೀವ್ ಬಬ್ಬರ್

0

ಮೈಸೂರು: ಕಾಂಗ್ರೆಸ್‌ ಏನೇ ಪ್ರಯತ್ನ ನಡೆಸಿದರೂ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಸಮೀಕ್ಷೆಗಳ ಪ್ರಕಾರ, ಬಿಜೆಪಿಗೆ ಹೆಚ್ಚಿನ ಒಲವು ಕಂಡುಬಂದಿದೆ ಎಂದು ಬಿಜೆಪಿ ದೆಹಲಿ ರಾಜ್ಯ ಘಟಕದ ಉಪಾಧ್ಯಕ್ಷ ರಾಜೀವ್ ಬಬ್ಬರ್ ಹೇಳಿದರು.

Join Our Whatsapp Group

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದರು.

ಅಧಿಕಾರಕ್ಕೆ ಬರಬೇಕೆನ್ನುವ ಕಾಂಗ್ರೆಸ್‌ ನಾಯಕರ ಕನಸನ್ನು ಜನರು ಈ ಬಾರಿಯೂ ನನಸು ಮಾಡುವುದಿಲ್ಲ. ಡಬಲ್ ಎಂಜಿನ್‌ ಸರ್ಕಾರ ನೀಡಿರುವ ಕೊಡುಗೆಗಳನ್ನು ಜನರು ನೆನೆಯುತ್ತಿದ್ದಾರೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ನಿರ್ಮಾಣದಿಂದ ನಗರದ ಅಭಿವೃದ್ಧಿ ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೈಲಿಗೆ ಹೋಗಿ ಬಂದವರು. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಕಾಂಗ್ರೆಸ್‌’ನ ಶೇ 50ರಷ್ಟು ನಾಯಕರು ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿದ್ದಾರೆ. ಹೀಗಿರುವಾಗ, ಪ್ರಿಯಾಂಕಾ ಗಾಂಧಿ ನಮ್ಮ ಸರ್ಕಾರದ ಬಗ್ಗೆ ಆರೋಪಿಸುವುದು ಸರಿಯೇ ಎಂದು ಕೇಳಿದರು.

ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಮೂಲ ಸೌಕರ್ಯಗಳ ಕೊರತೆ ತಾಂಡವವಾಡುತ್ತಿದೆ. ಶಾಸಕರು ಜನರಿಂದ ದೂರ ಉಳಿದಿದ್ದಾರೆ. ಕೋವಿಡ್ ಸಮಯದಲ್ಲೂ ಜನರ ಸಂಕಷ್ಟಕ್ಕೆ ಯಾವುದೇ ರೀತಿಯಲ್ಲೂ ಸ್ಪಂದಿಸಲಿಲ್ಲ. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ನರಸಿಂಹರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಸತೀಶ್‌ (ಸಂದೇಶ್ ಸ್ವಾಮಿ), ಮುಖಂಡ ಎಸ್‌. ಜಯಪ್ರಕಾಶ್‌, ಜಿಲ್ಲಾ ಘಟಕದ ಸಹ ವಕ್ತಾರ ಡಾ.ಕೆ. ವಸಂತಕುಮಾರ್‌, ಬಿಜೆಪಿ ರಾಜ್ಯ ಪರಿಷತ್‌ ಕಾರ್ಯಕಾರಣಿ ಸದಸ್ಯ ಬಿ.ಪಿ. ಮಂಜುನಾಥ್‌, ಎನ್‌.ಆರ್. ಕ್ಷೇತ್ರದ ಅಧ್ಯಕ್ಷ ಭಾನುಪ್ರಕಾಶ್‌ ಇದ್ದರು.