ಮನೆ ರಾಜಕೀಯ ಆಮ್ ಆದ್ಮಿ ಪಕ್ಷದ ಸದಸ್ಯತ್ವಕ್ಕೆ ವಕೀಲ ಜಗದೀಶ್ ರಾಜೀನಾಮೆ

ಆಮ್ ಆದ್ಮಿ ಪಕ್ಷದ ಸದಸ್ಯತ್ವಕ್ಕೆ ವಕೀಲ ಜಗದೀಶ್ ರಾಜೀನಾಮೆ

0

ಬೆಂಗಳೂರು: ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಗುರುವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್. ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ  ಎಂದರು.

“ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ,” ಎಂದು ವಿಡಿಯೋ ಹೇಳಿಕೆಯಲ್ಲಿ ವಕೀಲ ಜಗದೀಶ್ ಕೆ.ಎನ್ ತಿಳಿಸಿದ್ದಾರೆ.