ಮನೆ ಅಪರಾಧ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ

0

ಬೆಂಗಳೂರು: ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.

Join Our Whatsapp Group

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ.

ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ.

ನಿನ್ನೆ ರಾತ್ರಿ ಸುಮಾರು 9.30 ಕ್ಕೆ ಈ ವೇಳೆ ಭಾಸ್ಕರ್ ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.