ಮನೆ ಮನರಂಜನೆ ‘ಪೊನ್ನಿಯಿನ್ ಸೆಲ್ವನ್ 2’ ಭರ್ಜರಿ ಕಲೆಕ್ಷನ್

‘ಪೊನ್ನಿಯಿನ್ ಸೆಲ್ವನ್ 2’ ಭರ್ಜರಿ ಕಲೆಕ್ಷನ್

0

ಮಣಿರತ್ನಂ ನಿರ್ದೇಶನ, ಸ್ಟಾರ್ ಪಾತ್ರವರ್ಗ, ಮೊದಲ ಪಾರ್ಟ್​ನ ಯಶಸ್ಸಿನ ಹುಮ್ಮಸ್ಸಿನೊಂದಿಗೆ ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಏಪ್ರಿಲ್ 28ರಂದು ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನ ಬಾಕ್ಸ್ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿದೆ.. ಮುಂದಿನ ದಿನಗಳಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ.

Join Our Whatsapp Group

 ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮೊದಲ ದಿನ ಭಾರತದ ಬಾಕ್ಸ್ ಆಫೀಸ್​’ನಲ್ಲಿ 38 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಣಿ ರತ್ನಂ ಅವರ ನಿರ್ದೇಶನ ಕಮಾಲ್ ಮಾಡಿದೆ. ತಮಿಳುನಾಡು ಒಂದರಲ್ಲೇ ಈ ಚಿತ್ರ 25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣದಿಂದ 3-4 ಕೋಟಿ ರೂಪಾಯಿ, ಕರ್ನಾಟಕದಿಂದ 4-5 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗಿದೆ.

ಶನಿವಾರ (ಏಪ್ರಿಲ್ 29) ಹಾಗೂ ಭಾನುವಾರ (ಏಪ್ರಿಲ್ 30) ಈ ಸಿನಿಮಾ ಮತ್ತಷ್ಟು ಗಳಿಕೆ ಮಾಡುವ ಸಾಧ್ಯತೆ ಇದೆ. ಸೋಮವಾರ (ಮೇ 1) ಕಾರ್ಮಿಕರ ದಿನಾಚರಣೆ ಪ್ರಯುಕ್ತ ರಜೆ ಇದೆ. ಇದು ಸಿನಿಮಾಗೆ ಸಹಕಾರಿ ಆಗಲಿದೆ. ಹೀಗಾಗಿ, ಕೆಲವೇ ದಿನಗಳಲ್ಲಿ ಚಿತ್ರದ ಗಳಿಕೆ 100 ಕೋಟಿ ರೂಪಾಯಿ ದಾಟಲಿದೆ.

 ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾದಲ್ಲಿ ವಿಕ್ರಮ್, ಐಶ್ವರ್ಯಾ ರೈ ಬಚ್ಚನ್, ಕಾರ್ತಿ, ತ್ರಿಶಾ, ಶೋಭಿತಾ ಧುಲಿಪಾಲ್​, ಪ್ರಕಾಶ್ ರಾಜ್​ ಮೊದಲಾದ ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ. ಕಲ್ಕಿ ಕೃಷ್ಣಮೂರ್ತಿ ಅವರು ಬರೆದ ಪುಸ್ತಕ ಆಧರಿಸಿ ಈ ಸಿನಿಮಾ ಸಿದ್ಧಗೊಂಡಿದೆ.

ಏಪ್ರಿಲ್ 21ರಂದು ರಿಲೀಸ್ ಆದ ಸಲ್ಮಾನ್ ಖಾನ್ ನಟನೆಯ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ ಮೊದಲ ದಿನ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಅದಕ್ಕೂ ಒಂದೂವರೆ ಪಟ್ಟು ಹೆಚ್ಚು ಗಳಿಕೆಯನ್ನು ‘ಪೊನ್ನಿಯಿನ್ ಸೆಲ್ವನ್ 2’ ಸಿನಿಮಾ ಮಾಡಿದೆ. ‘ಪೊನ್ನಿಯಿನ್ ಸೆಲ್ವನ್’ ಚಿತ್ರ ಭಾರತದಲ್ಲಿ 327 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಗಳಿಕೆಯನ್ನು ಸೀಕ್ವೆಲ್ ಹಿಂದಿಕ್ಕಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.