ಮನೆ ರಾಜಕೀಯ ರಾಹುಲ್ ಗಾಂಧಿ ಅವನ್ಯಾವ ನಾಯಕರೀ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ಎಸ್.ಯಡಿಯೂರಪ್ಪ

ರಾಹುಲ್ ಗಾಂಧಿ ಅವನ್ಯಾವ ನಾಯಕರೀ: ಕಾಂಗ್ರೆಸ್ ವಿರುದ್ಧ ಗುಡುಗಿದ ಬಿ.ಎಸ್.ಯಡಿಯೂರಪ್ಪ

0

ರಾಯಚೂರು: ಕಾಂಗ್ರೆಸ್​ ಮುಳುಗುತ್ತಿರುವ ಹಡಗು. ರಾಹುಲ್ ಗಾಂಧಿಯನ್ನು ಮೋದಿಗೆ ಸಮಾನ ಎನ್ನಲು ಸಾಧ್ಯನಾ? ರಾಹುಲ್ ಗಾಂಧಿಯನ್ನು ಅವನ್ಯಾವ ನಾಯಕರೀ ಎಂದು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.

Join Our Whatsapp Group

ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ವಿಶ್ವವೇ ಕೊಂಡಾಡುತ್ತಿರುವ ವಿಶ್ವ ನಾಯಕ ಮೋದಿ ಎಲ್ಲಿ? ಉತ್ತರಪ್ರದೇಶದಲ್ಲಿ 400 ಸ್ಥಾನಗಳಲ್ಲಿ ಕೇಲವ 4 ಸೀಟುಗಳನ್ನು ಗೆದ್ದಿರುವ ಕಾಂಗ್ರೆಸ್ ಪಕ್ಷ ಎಲ್ಲಿ? ಎಂದು ಖಾರವಾಗಿ ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಬಿಜೆಪಿ ಗೆಲ್ಲಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿ, ಕಾಂಗ್ರೆಸ್​ನವರು ಯಾಕೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾರಂತಹ ನಾಯಕರಿದ್ದಾರೆ. ಇವರನ್ನು ಎದುರಿಸಲು ಕೈ ನಾಯಕರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ನವರು ಮನಬಂದಂತೆ ಮಾತನಾಡುತ್ತಾರೆ ಎಂದರು.

ಬಿಜೆಪಿಯವರು ಯಡಿಯೂರಪ್ಪ ಅವರು ಕಣ್ಣೀರು ಹಾಕುವಂತೆ ಮಾಡಿದರು ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, ನಾನು ಕಣ್ಣೀರು ಹಾಕುವ ಪ್ರಶ್ನೆಯೇ ಇಲ್ಲ. ನನ್ನನ್ನು ಯಾರೂ ಒತ್ತಾಯಪೂರ್ವಕವಾಗಿ ಕೆಳಗಿಳಿಸಿಲ್ಲ. ಸ್ವಂತ ನಿರ್ಧಾರ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆಯಲ್ಲೂ ಪ್ರಚಾರ ಮಾಡಿ ಬಿಜೆಪಿ‌ ಅಧಿಕಾರಕ್ಕೆ ತರುತ್ತೇನೆ. ನಿಮ್ಮ ಆಶಿರ್ವಾದ ನಮ್ಮ ಮೇಲಿರಬೇಕು ಎಂದರು.

ಅಲ್ಲೋಬ್ಬ ಇಲ್ಲೊಬ್ಬ ವ್ಯಕ್ತಿ ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ. ಹೀಗಾಗಿ ನಾಳೆಯಿಂದ ಅಭ್ಯರ್ಥಿ ಗೆಲುವಿಗಾಗಿ ಹಾಗೂ ಮನೆ ಮನೆಗೆ ಹೋಗಿ ಜನರನ್ನ ಭೇಟಿ ಮಾಡಿ ಅದನ್ನ ಸರಿಪಡಿಸಿ ಅಂತ ಕಾರ್ಯಕರ್ತರಿಗೆ ಕರೆ ನೀಡಿದರು. ಇದೇ ವೇಳೆ ಪ್ರಸಕ್ತ ಚುನಾವಣೆಯಲ್ಲಿ ನಾವು 140ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.