ಮನೆ ರಾಜಕೀಯ ಬಿಜೆಪಿ ಅಭ್ಯರ್ಥಿಗಿಂತ ಅತಿಹೆಚ್ಚು ಮತಗಳಿಂದ ಗೆಲ್ಲುತ್ತೇನೆ: ಜಗದೀಶ್ ಶೆಟ್ಟರ್

ಬಿಜೆಪಿ ಅಭ್ಯರ್ಥಿಗಿಂತ ಅತಿಹೆಚ್ಚು ಮತಗಳಿಂದ ಗೆಲ್ಲುತ್ತೇನೆ: ಜಗದೀಶ್ ಶೆಟ್ಟರ್

0

ಹುಬ್ಬಳ್ಳಿ: ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ. ಅಮಿತ್ ಶಾ ಹೇಳಲಿ ಯಾರೇ ಹೇಳಲಿ ಬಿಜೆಪಿ ಅಭ್ಯರ್ಥಿಗಿಂತ ಅತಿಹೆಚ್ಚು ಮತಗಳಿಂದ ಗೆದ್ದು ಬರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

Join Our Whatsapp Group

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಒಳ ಮತ್ತು ಹೊರ ಹೊಡೆತಗಳಿವೆ. ಇದೀಗ ಬಿಜೆಪಿಯವರು ನನ್ನನ್ನು ಸೋಲಿಸಲು ಕಾರ್ಯಕರ್ತರ ಮೇಲೆ ಒತ್ತಡ ತರುತ್ತಿದ್ದಾರೆ. ಇದರಿಂದ ತಾಳ್ಮೆಯ ಕಟ್ಟೆ ಒಡೆದು ಹೋಗುತ್ತಿದ್ದು, ಇದರ ಪರಿಣಾಮ ಮುಂದಿನ ಲೋಕಸಭಾ ಚುನಾವಣೆ ಮೇಲೆ ಬೀರುತ್ತದೆ ಕಾದುನೋಡಿ ಎಂದು  ತಿಳಿಸಿದರು.

ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ವರ್ಚಸ್ಸು ಕಡಿಮೆಯಾಗಿಲ್ಲ. ಒಂದು ಕಪ್ಪುಚುಕ್ಕೆ ಇಲ್ಲದ ರಾಜಕಾರಣ ಮಾಡಿದ್ದೇನೆ. ಏನೂ ತಪ್ಪು ಮಾಡದವರಿಗೆ ಟಿಕೆಟ್ ಕೈ ತಪ್ಪಿಸಿದ್ದಾರೆಂಬ ಅನುಕಂಪ ಇದೆ. ಜನರ ಕರುಣೆ, ಬೇಸರವು ನನ್ನನ್ನು ಶಾಸಕನಾಗಿ ಆರಿಸಿ ತರಬೇಕೆಂಬ ಛಲಕ್ಕೆ ಕಾರಣವಾಗಿದೆ. ಹಿಂದಿನ ಚುನಾವಣೆಗಿಂತ ಈ ಬಾರಿ ಅತಿಹೆಚ್ಚು ಮತಗಳನ್ನು ಪಡೆದು ಆರಿಸಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಪದಾಧಿಕಾರಿಗಳ ಉಚ್ಛಾಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರೆಲ್ಲ ಮೊದಲೇ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಪುನಃ ಉಚ್ಛಾಟನೆ ಮಾಡಿರುವುದು ಹಾಸ್ಯಾಸ್ಪದ ಎಂದರು.

ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಮಂತ್ರಿ ಸ್ಥಾನ ಬೇಡ ಎಂದಿದ್ದಕ್ಕೆ ಟಿಕೆಟ್ ಕೊಡಲಿಲ್ಲ ಎಂಬ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಶೆಟ್ಟರ್, ಸಚಿವ ಸಂಪುಟದಲ್ಲಿ ಮಂತ್ರಿ ಆಗಲಿಲ್ಲ ಎಂದರೆ ಎಂಎಲ್ ಎ ಟಿಕೆಟ್ ಕೊಡುವುದಿಲ್ಲ ಎಂಬುದು ಸರಿಯಲ್ಲ. ಇದು ವಿಚಿತ್ರ ಹೇಳಿಕೆ. ನಾನು ಅಧಿಕಾರ ಬೇಡವೆಂದು ಸುಮ್ಮನೆ ಮನೆಯಲ್ಲಿ ಕುಳಿತರೆ ಅದನ್ನು ಗುರುತು ಮಾಡಬೇಕಿತ್ತು. ಅದು ಬಿಟ್ಟು ಕ್ಯಾಬಿನೆಟ್ ಸ್ಥಾನ ಬೇಡ ಎಂದಾಗ ಟಿಕೆಟ್ ಕೊಡುವುದಿಲ್ಲ ಎಂದಿದ್ದರೆ ಅಥವಾ ಚುನಾವಣೆಗೂ ಮೂರ್ನಾಲ್ಕು ತಿಂಗಳ ಮುಂಚೆಯೇ ಟಿಕೆಟ್ ಕೊಡುವುದಿಲ್ಲ ಎಂದು ಹೇಳಿದ್ದರೆ ಆಗಲೇ ಮುಗಿದು ಹೋಗುತ್ತಿತ್ತು. ಅದು ಬಿಟ್ಟು ಈಗ ವಿತಂಡ ವಾದ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.