ಮುಂಬೈ(ಮಹಾರಾಷ್ಟ್ರ): ಮಹಾತ್ಮಾ ಗಾಂಧಿಯವರ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ.
ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.
ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್’ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಮಗನಾಗಿ ಜನಿಸಿದರು.
ಸಾಮಾಜಿಕ ಕಾರ್ಯಕರ್ತನಾಗಿ ತಮ್ಮ ಅಜ್ಜ(ಮಹಾತ್ಮಾ ಗಾಂಧಿ)ನ ಹಾದಿಯಲ್ಲಿ ಸಾಗಿದವರು. ಕೆಲವು ಪುಸ್ತಕಗಳನ್ನು ಬರೆದಿದ್ದಾರೆ. ಅವುಗಳಲ್ಲಿ, ‘ದಿ ಗಿಫ್ಟ್ ಆಫ್ ಆಂಗರ್: ಅಂಡ್ ಅದರ್ ಲೆಸನ್ಸ್ ಫ್ರಂ ಮೈ ಗ್ರ್ಯಾಂಡ್ ಫಾದರ್ ಮಹಾತ್ಮ ಗಾಂಧಿ’ ಅವರ ಪ್ರಮುಖವಾಗಿದೆ. ಅರುಣ್ ಗಾಂಧಿ 1987ರಲ್ಲಿ ಕುಟುಂಬ ಸಮೇತ ಅಮೆರಿಕದಲ್ಲಿ ನೆಲೆಸಿದ್ದರು. ಅಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ವಿಶ್ವವಿದ್ಯಾಲಯದಲ್ಲಿ ಅಹಿಂಸೆಗೆ ಸಂಬಂಧಿಸಿದ ಸಂಸ್ಥೆ ಸ್ಥಾಪಿಸಿದ್ದರು.
ಮೃತರ ಅಂತ್ಯಕ್ರಿಯೆ ಸಂಜೆ 05:00 ರಿಂದ 06:30 ರವರೆಗೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.