ಮನೆ ರಾಜ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ: ಪ್ರಧಾನಿ ಮೋದಿ ತಿರುಗೇಟು

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ: ಪ್ರಧಾನಿ ಮೋದಿ ತಿರುಗೇಟು

0

ವಿಜಯನಗರ: ಕಾಂಗ್ರೆಸ್’​​ನ ಈ​ ಪ್ರಣಾಳಿಕೆಯಲ್ಲಿ ಹೊಸ ತಂತ್ರ ಅಡಗಿದೆ. ಕಾಂಗ್ರೆಸ್​​’ನವರಿಗೆ ಹನುಮಂತನ ಕಂಡರೂ ಆಗಿಬರುವುದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಪರೋಕ್ಷವಾಗಿ ಬಜರಂಗದಳ ನಿಷೇಧ ಪ್ರಸ್ತಾಪಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟಾಂಗ್ ನೀಡಿದ್ದಾರೆ.

Join Our Whatsapp Group

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಭಾರತ ಅಭಿವೃದ್ದಿಯಾಗಬೇಕಾದರೆ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ನೀವು ಈಗ ನೋಡುತ್ತಿದ್ದೀರಿ. ಕಾಂಗ್ರೆಸ್​ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ​ ಹಿಡಿದುಕೊಂಡು ಕುಳಿತಿದೆ ಎಮದು ಕಿಡಿಕಾರಿದ್ದಾರೆ.

ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್​ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್​ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್​ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಮೋದಿ ಗುಡುಗಿದರು.