ಬೆಂಗಳೂರು: ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ 24 ಗಂಟೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಮಂಡ್ಯ ಕೆವಿಕೆ, ಮಾಲೂರು, ಸರಗೂರಿನಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ, ಮುದಗಲ್, ಕೃಷ್ಣರಾಜಸಾಗರ, ಕನಕಪುರ, ಹರದನಹಳ್ಳಿ, ಗಬ್ಬೂರು, ಜಾಲಹಳ್ಳಿ, ರಾಯಚೂರು, ಸಾಲಿಗ್ರಾಮ, ಶ್ರೀರಂಗಪಟ್ಟಣ, ಬೆಂಗಳೂರು ಕೆಎಎಲ್, ಬಂಡೀಪುರ, ಕೊಳ್ಳೇಗಾಲ, ಚಾಮರಾಜನಗರ, ಮೈಸೂರು, ಹಲಬರ್ಗಾ, ಹುಲ್ಸೂರು, ಸಾಯಿಗಾಂವ್, ಭಾಲ್ಕಿ, ದೇವದುರ್ಗ, ಕೋಲಾರ, ಗೌರಿಬಿದನೂರು, ತೊಂಡೇಭಾವಿ, ಜ್ಞಾನಭಾರತಿ ವಿವಿ ಕ್ಯಾಂಪಸ್, ಗೋಪಾಲ್ನಗರ, ಉತ್ತರಹಳ್ಳಿ, ಬೆಂಗಳೂರು ನಗರ, ಮಂಠಾಳ, ನಿಟ್ಟೂರು, ಔರಾದ್, ಕುರ್ಡಿ, ಮಸ್ಕಿ, ಮಾನ್ವಿ, ಕಕ್ಕೇರಿ, ರಾಮನಗರ, ಖಜೂರಿ, ಮುಡಬಿ, ಹೊಸಕೋಟೆ, ಮಂಡ್ಯ, ಬರಗೂರು, ಚಿಕ್ಕಬಳ್ಳಾಪುರ, ಮೂಡಿಗೆರೆಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿಯಿಂದಲೂ ಮಳೆ ಸುರಿಯುತ್ತಿದೆ, ಮೋಡಕವಿದ ವಾತಾವರಣವಿರಲಿದ್ದು, ಇಡೀ ದಿನವೂ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎಚ್’ಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ದೊರೆತಿದೆ. ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.