ಹೈದರಾಬಾದ್: ಜನಪ್ರಿಯ ನಟ ಶರತ್ ಬಾಬು ನಿಧನರಾಗಿದ್ದಾರೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಅದು ಸುಳ್ಳು ಸುದ್ದಿಯಾಗಿದ್ದು, ಶರತ್ ಬಾಬು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಸಹೋದರಿ ತಿಳಿಸಿರುವುದಾಗಿ ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಶರತ್ ಬಾಬು ಅವರನ್ನು ಏಪ್ರಿಲ್ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್’ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್’ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್’ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಶೀಘ್ರವೇ ಗುಣಮುಖರಾಗಲಿದ್ದಾರೆ ಎನ್ನಲಾಗಿದೆ.
ಶರತ್ ಬಾಬು ನಿಧನರಾಗಿದ್ದಾರೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡಿದ್ದವು. ಕೆಲವು ಟಾಲಿವುಡ್, ಕಾಲಿವುಡ್ ಸೆಲೆಬ್ರಿಟಿಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಶೋಕ ಸಂದೇಶಗಳನ್ನು ಪ್ರಕಟಿಸಿದ್ದರು. ಆದರೆ ಸುದ್ದಿ ಸುಳ್ಳೆಂದು ಖಾತ್ರಿಯಾದ ಬಳಿಕ ಪೋಸ್ಟ್ಗಳನ್ನು ಡಿಲೀಟ್ ಮಾಡಿದ್ದಾರೆ.
1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ. ರಜನೀಕಾಂತ್ ಜೊತೆಗೆ ಮುತ್ತು, ಅರುಣಾಚಲಂ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ಶರತ್ ಬಾಬು ನಟಿಸಿದ್ದಾರೆ. ತಮ್ಮ 40 ವರ್ಷದ ಸಿನಿ ಬದುಕಿನಲ್ಲಿ ಸುಮಾರು 200 ಕ್ಕೂ ಹೆಚ್ಚು ಪಾತ್ರಗಳಲ್ಲಿ ಶರತ್ ಬಾಬು ನಟಿಸಿದ್ದಾರೆ.
ಇತ್ತೀಚೆಗೆ ಚಿತ್ರರಂಗದಿಂದ ತುಸು ಅಂತರ ಕಾಯ್ದುಕೊಂಡಿದ್ದ ಶರತ್ ಬಾಬು, ಕೊನೆಯದಾಗಿ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಸಿನಿಮಾದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.