ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಹಾಗೂ ಎಕೆ 47 ರೈಫಲ್ಸ್ ಹಾಗೂ ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿದೆ.
ಬಾರಾಮುಲ್ಲಾದ ವಾನಿಗಂ ಪಯೀನ್ ಕ್ರೀರಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಸ್ಥಳಕ್ಕೆ ಭದ್ರತಾಪಡೆಗಳು ತೆರಳಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಯೋಧರು, ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಹತ್ಯೆಯಾದ ಇಬ್ಬರು ಸ್ಥಳೀಯ ಉಗ್ರರೆಂದು ಹೇಳಲಾಗುತ್ತಿದ್ದು, ಶೋಪಿಯಾನ್ ಜಿಲ್ಲೆಯ ಶಕೀಸ್ ಮಸೀದ್ ನಜರ್ ಮತ್ತು ಹನಾನ್ ಅಹ್ಮದ್ ಶೆಹ್ ಎಂದು ಗುರ್ತಿಸಲಾಗಿದೆ.
ಇಬ್ಬರೂ ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದು, 2023ರ ಮಾರ್ಚ್ ತಿಂಗಳಿನಲ್ಲಿ ಇಬ್ಬರು ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದರು ಎಂದು ಕಾಶ್ಮೀರದ ಎಡಿಜಿಪಿ ಮಾಹಿತಿ ನೀಡಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.