ಮನೆ ರಾಜ್ಯ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​’ಆರ್​’ಟಿಸಿ

ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​’ಆರ್​’ಟಿಸಿ

0

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಆದೇಶ ಹೊರಡಿಸಿದೆ.

Join Our Whatsapp Group

ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಬಿ. ಫಾರ್ಮ್ ಮತ್ತು ವಿವಿಧ ಕೋರ್ಸ್’​ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್​ ಪಾಸ್​ ಅವಧಿಯನ್ನು ಕೆಎಸ್​’ಆರ್​’ಟಿಸಿ ವಿಸ್ತರಿಸಿ ಸುತ್ತೋಲೆ ಹೊರಡಿಸಿದೆ.

ವಿದ್ಯಾರ್ಥಿಗಳ ತರಗತಿ ಅಥವಾ ಪರೀಕ್ಷೆ ನಡೆಯುತ್ತಿರುವುದನ್ನು ಖಚಿತಪಡಿಸಿಕೊಂಡು ಹೆಚ್ಚುವರಿ ಹಣ ಪಾವತಿಸಿಕೊಂಡು ಒಂದು ಅಥವಾ ಎರಡ ತಿಂಗಳ ಅವಧಿಗೆ ಬಸ್​ ಪಾಸ್ ವಿಸ್ತರಿಸಲು ಅವಕಾಶ ಕಲ್ಪಿಸಲಾಗಿದೆ.

 ಈ ಬಗ್ಗೆ ಎಲ್ಲಾ ಚಾಲಕ-ನಿರ್ವಾಹಕರಿಗೆ ಅಗತ್ಯ ಮಾಹಿತಿ ನೀಡುವಂತೆ ಕೆಎಸ್’​ಆರ್​’ಟಿಸಿ ಮುಖ್ಯ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಬಸ್ ಪಾಸ್ ಅವಧಿ ಮುಗಿಯಲಿದೆ. ಆದ್ರೆ, ಕೆಲ ಕೋರ್ಸ್​ಗಳ ಪರೀಕ್ಷೆಗಳು ಇರುವುದರಿಂದ ಪಾಸ್ ಅವಧಿ ವಿಸ್ತರಣೆಗೆ ವಿದ್ಯಾರ್ಥಿಗಳು ಮನವಿ ಮಾಡಿವೆ. ಅದಂತೆ ವಿವಿಧ ಕೋರ್ಸ್‌’ಗಳ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಿ ಬಸ್ ಪಾಸ್ ಒಂದು ಅಥವಾ ಎರಡು ತಿಂಗಳು ವಿಸ್ತರಿಸುವುದಾಗಿ ಕೆಎಸ್’ಆರ್​​ಟಿಸಿ ತಿಳಿಸಿದೆ.

ವಿದ್ಯಾರ್ಥಿ ಬಸ್ ಪಾಸ್ ಅವಧಿಯು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಆದರೆ ವಿದ್ಯಾರ್ಥಿಗಳಿಗೆ ತರಗತಿಗಳು ಇನ್ನೂ ನಡೆಯುತ್ತಿದ್ದು, ಪರೀಕ್ಷೆಗಳೂ ಹತ್ತಿರದಲ್ಲೇ ಇದೆ. ಈ ನಡುವೆ ನಿಗಮವು ಬಸ್ ಪಾಸ್ ಅವಧಿಯನ್ನು ವಿಸ್ತರಿಸಿರುವುದು ವಿದ್ಯಾರ್ಥಿಗಳಿಗೆ ಅನಕೂಲವಾದಂತಾಗಿದೆ.