ಮನೆ ರಾಜಕೀಯ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅವಮಾನಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅವಮಾನಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

0

ಕಲ್ಬುರ್ಗಿ:  ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Join Our Whatsapp Group

ಭಜರಂಗದಳ ನಿಷೇಧದ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ ಹಿನ್ನೆಲೆ ಸುದ್ಧಿಗೋಷ್ಠಿ ನಡೆಸಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರಣಾಳಿಕೆಯನ್ನು ಸುಟ್ಟು ಹಾಕಿದ್ದರು.

ಈ ಕುರಿತು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕೆ.ಎಸ್​.ಈಶ್ವರಪ್ಪ ಪ್ರಣಾಳಿಕೆ ಸುಟ್ಟಿದ್ದು ಜನರಿಗೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಸುಟ್ಟು ಹಾಕಿದಂತೆ. ಈಶ್ವರಪ್ಪ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ಬಿಜೆಪಿಯವರ ಹಿಂದುತ್ವ ಬೇರೆ, ನಮ್ಮ ಹಿಂದುತ್ವವೇ ಬೇರೆ. ನಾನು ಹಿಂದೂ, ಅವರು ಕೂಡ ಹಿಂದೂ ಎಂದು ಕಿಡಿಕಾರಿದರು.