ಮನೆ ರಾಜ್ಯ ಮತಗಟ್ಟೆಗಳಿಗೆ ಜಿಲ್ಲಾ ಪಂಟಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಭೇಟಿ ಮೂಲ ಭೂತ ಸೌಕರ್ಯಗಳ ಪರಿಶೀಲನೆ

ಮತಗಟ್ಟೆಗಳಿಗೆ ಜಿಲ್ಲಾ ಪಂಟಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಭೇಟಿ ಮೂಲ ಭೂತ ಸೌಕರ್ಯಗಳ ಪರಿಶೀಲನೆ

0

ಮೈಸೂರು: ಸಾರ್ವಜನಿಕ ಚುನಾವಣೆಯ ಮತದಾನ ಪ್ರಕ್ರಿಯೆಯು ಮೇ.10 ರಂದು  ನಡೆಯುವ ಹಿನ್ನೆಲೆ ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು ಭೇಟಿ ನೀಡಿ ಮೂಲಭೂತ ಸೌಕರ್ಯಗಳನ್ನು ಪರಿಶೀಲನೆ ಮಾಡಿದರು.

Join Our Whatsapp Group

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಗುಂಗ್ರಾಲ್ ಛತ್ರ ಗ್ರಾ.ಪಂ. ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 18-ರಟ್ಟನಹಳ್ಳಿ, ಇಲವಾಲ ಗ್ರಾ.ಪಂ. ವ್ಯಾಪ್ತಿಯ ಮತಗಟ್ಟೆ ಸಂಖ್ಯೆ-33, ನಾಗವಾಲ ಗ್ರಾ.ಪಂ. ವ್ಯಾಪ್ತಿಯ 136-ಬೋಮ್ಮೆನಹಳ್ಳಿ, ಡಿ.ಎ.ಜಿ ಹಳ್ಳಿ ಗ್ರಾ.ಪಂ. ವ್ಯಾಪ್ತಿಯ 184-ಶೆಟ್ಟನಾಯಕನಹಳ್ಳಿ, ಧನಗಳ್ಳಿ ಗ್ರಾ.ಪಂ. ವ್ಯಾಪ್ತಿಯ 256-ಎಡಹಳ್ಳಿ, ಉದ್ಬೂರು ಗ್ರಾ.ಪಂ. ವ್ಯಾಪ್ತಿಯ ಮತಗಟ್ಟೆ ಸಂಖ್ಯೆ-286 ಕ್ಕೆ ಭೇಟಿ ನೀಡಿದರು.

ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ  ಚೇತರಿಗೆ ಅನುಕೂಲವಾಗುವಂತೆ ರ್ಯಾಂಪ್ ಹಾಗೂ ಗಾಲಿಕುರ್ಚಿ ವ್ಯವಸ್ಥೆ, ಕುಡಿಯುವ ನೀರು, ನೆರಳು ಸೇರಿದಂತೆ ಸುಸಜ್ಜಿತ ಶೌಚಾಲಯ ವ್ಯವಸ್ಥೆಯನ್ನು ಪರಿಶೀಲಿಸಿ ಮಾಹಿತಿ ಪಡೆದು, ಮತದಾನ ದಿನದಂದು ಯಾವುದೇ ಗೊಂದಲ ಉಂಟಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ತಾಲ್ಲೂಕಿನ ಹೋಬಳಿ ಮಟ್ಟದಲ್ಲಿ ಮತದಾನ ಕುರಿತು ಅರಿವು ಮೂಡಿಸಲೆಂದು ಸಿದ್ದಪಡಿಸಿದ ‘ಮತದಾನ ಜಾಗೃತಿ ರಥಕ್ಕೆ’ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮೈಸೂರು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಚ್‌.ಡಿ.ಗಿರೀಶ್ ಅವರು, ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್ ಅವರು ಸೇರಿದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.