ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಎಸ್ ನಿರಂಜನಕುಮಾರ್ ಪರ ಚಿತ್ರನಟ ಕಿಚ್ಚ ಸುದೀಪ್ ರೋಡ್ ಶೋ ನಡೆಸುವ ಮೂಲಕ ಅಬ್ಬರದ ಪ್ರಚಾರ ನಡೆಸಿದರು.
ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಆಗಮಿಸಿದ ಕಿಚ್ಚ ಸುದೀಪ್ ಅವರನ್ನು ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಮತ್ತು ಪುರಸಭಾ ಅಧ್ಯಕ್ಷ ಪಿ.ಗಿರೀಶ್ ಸ್ವಾಗತಿಸಿ ಬರಮಾಡಿಕೊಂಡರು. ನಟ ಸುದೀಪ್ ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಅವರೊಟ್ಟಿಗೆ ತೆರೆದ ಪ್ರಚಾರ ವಾಹನವೇರುತ್ತಿದ್ದಂತೆ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಕೇಕೆ, ಶಿಳ್ಳೆ, ಚಪ್ಪಾಳೆ ಹಾಕುವ ಮೂಲಕ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ಸುದೀಪ್, ಗೆದ್ದೆ ಗೆಲ್ಲೆವೆವು ನಾವು ಒಂದು ದಿನ- ಗೆಲ್ಲಲೇಬೇಕು ಒಳ್ಳೆತನ ಎಂದು ಹೇಳುವ ಮೂಲಕ ಸತತವಾಗಿ ಸೋತರು ಗೆದ್ದ ನಿರಂಜನಕುಮಾರ್ ಈ ಬಾರಿಯೂ ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ನಾನು ಚಿತ್ರರಂಗದಲ್ಲಿ ಇವತ್ತು ಸಹ ಬಣ್ಣಹಚ್ಚಲು ನಿಮ್ಮ ಈ ಪ್ರೀತಿ ಅಭಿಮಾನವೇ ಕಾರಣ ನಿಮ್ಮ ಈ ಋಣವನ್ನ ನಾನೆಂದಿಗೂ ತೀರಿಸಲು ಸಾಧ್ಯವಿಲ್ಲ. ನಿಮ್ಮ ಈ ಜಯಘೋಷಗಳನ್ನ ಸಹೋದರ ನಿರಂಜನ್ ಗೆಲುವಿನಲ್ಲಿ ಕೇಳಲು ಬಯಸುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದರು.
ಮಡಹಳ್ಳಿ ವೃತ್ತದಿಂದ ಆರಂಭವಾದ ರೋಡ್ ಶೋ ಹಳೇ ಬಸ್ ನಿಲ್ದಾಣದಲ್ಲಿ ಅಂತ್ಯಗೊಂಡಿತು. ವಾಹನದಿಂದ ಸುದೀಪ್ ಕೆಳಗಿಳಿಯುತ್ತಿದ್ದಂತೆ ನೂಕುನುಗ್ಗಲು ಉಂಟಾಯಿತು. ಈ ವೇಳೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಬೀಸಿದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.