ಮನೆ ಸುದ್ದಿ ಜಾಲ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ: ಡಾ.ಕೆ.ವಿ ರಾಜೇಂದ್ರ

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ: ಡಾ.ಕೆ.ವಿ ರಾಜೇಂದ್ರ

0

ಮೈಸೂರು: ಮೇ 10 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

Join Our Whatsapp Group

ಇಂದು ನಗರದಲ್ಲಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸ್ವೀಪ್ ವತಿಯಿಂದ ಆಯೋಜಿಸಲಾಗಿದ್ದ ವಿಂಟೇಜ್ ಕಾರು ಮತ್ತು ಟಾಂಗಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ದೇಶದ ಭವಿಷ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆಯಂದು ಸಾರ್ವತ್ರಿಕ ರಜೆ ಇರುವ ಕಾರಣ ಅಂದು ಮನೆಯಲ್ಲಿಯೇ ಕೂರದೆ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ಹಾಗೂ 80 ವರ್ಷ ಮೇಲ್ಪಟ್ಟವರಿಗೆ ಮತದಾನ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು ವಯಸ್ಸಾದವರು ಮತದಾರರು ಮತಗಟ್ಟೆಗೆ ಬರಲಾಗದಿದ್ದರೆ ಅಂಥವರಿಗೆ ವಾಹನದ ವ್ಯವಸ್ಥೆ ಬೇಕಿದ್ದಲ್ಲಿ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮೈಸೂರು ತನ್ನ ಸಾಂಸ್ಕೃತಿಕತೆಯಿಂದ ಹೆಸರುವಾಸಿಯಾಗಿದ್ದು, ಇಂದಿಗೂ ಹೆಚ್ಚಾಗಿ ಟಾಂಗಾ ಗಾಡಿಗಳ ಬಳಕೆ ನಗರದಲ್ಲಿದೆ. ವಿಟೇಂಜ್ ಕಾರು ಗಳ ಪ್ರಾಮುಖ್ಯತೆ ಹಾಗೂ ಪರಿಸರಕ್ಕೆ ಹಾನಿಯಾಗದ ರೀತಿ ಅವುಗಳ ಮರುಬಳಕೆ ಬಗ್ಗೆ ಅರಿವನ್ನ ಹೊಂದಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ , ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ ,ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಪ್ರಾಚ್ಯ ವಸ್ತು ಸಂಗ್ರಹಾಲಯ ಇಲಾಖೆಯ ಆಯುಕ್ತರಾದ ದೇವರಾಜು ಹಾಗೂ ಅಂತರಾಷ್ಟ್ರೀಯ ಯೋಗಪಟುವಾದ ಖುಷಿ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.