ಮನೆ ರಾಜಕೀಯ ಪಠ್ಯದಿಂದ ಟಿಪ್ಪು ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು: ಶಿಕ್ಷಣ ಸಚಿವ ನಾಗೇಶ್

ಪಠ್ಯದಿಂದ ಟಿಪ್ಪು ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು: ಶಿಕ್ಷಣ ಸಚಿವ ನಾಗೇಶ್

0

ಬೆಂಗಳೂರು: ಪಠ್ಯ ಕ್ರಮದಿಂದ ಟಿಪ್ಪು ಸುಲ್ತಾನ್ ವಿಚಾರ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಈ ವಿಚಾರದಲ್ಲಿ ಮಾಧ್ಯಮಗಳು ಊಹಾಪೋಹಗಳನ್ನು ಹರಡಬಾರದು, ಸದ್ಯದಲ್ಲಿಯೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾದ ಮಾಹಿತಿ ನೀಡುವುದಾಗಿ ಹೇಳಿದರು.

ಟಿಪ್ಪು ವಿಚಾರವನ್ನು ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡೆಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಪರಿಚಯಿಸಲು ಪ್ರಯತ್ನಿಸಿದ್ದೇವೆ. ದೋಷಗಳು, ತಾಂತ್ರಿಕ ತಪ್ಪುಗಳನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಈ ಹಿಂದೆ ಇತಿಹಾಸ ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸಲಾಗುತ್ತಿದೆ. ಮಕ್ಕಳು ಓದಲೇಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನದಲ್ಲಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ಸಚಿವರು ತಿಳಿಸಿದರು.

ದುಪ್ಪಟ್ಟಾಗೆ ಅವಕಾಶ ನೀಡುವ ಸಿದ್ದರಾಮಯ್ಯ ಆಗ್ರಹ ಕುರಿತು ಪ್ರತಿಕ್ರಿಯಿಸಿದ ನಾಗೇಶ್, ಸಿದ್ದರಾಮಯ್ಯ ಅವರು ಒಬ್ಬ ಸಿಎಂ ಆಗಿ, ಲಾಯರ್ ಆಗಿ ಬೆಳೆದಂತವರು. ಅಂತವರು ಯಾವುದೋ ಒತ್ತಡಕ್ಕೆ ಮಣಿದು ಆ ಆಗ್ರಹ ಮಾಡಿದ್ದಾರೆ. ಅವರು ಸದನದಲ್ಲಿ ಭಾಷಣ ಮುಗಿಸಿದ ಬಳಿಕ ಯಾರದೋ ಒತ್ತಡಕ್ಕೆ ಮತ್ತೆ ಎದ್ದು ನಿಂತು ದುಪ್ಪಟ್ಟಾ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಿದ್ದರಾಮಯ್ಯ ತಮ್ಮ ಒಟ್ಟು ಭಾಷಣದಲ್ಲಿ ಹಿಜಾಬ್ ಬಗ್ಗೆ ಏನೂ ಮಾತನಾಡಿರಲಿಲ್ಲ. ಮೇಧಾವಿಗಳು ಅನುಭವಿ ರಾಜಕಾರಣಿಯಾಗಿ , ಪ್ರತಿಪಕ್ಷ ನಾಯಕನಾಗಿ ಅವರಿಗೆ ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಇರುವ ಪ್ರಾಮುಖ್ಯತೆ ಗೊತ್ತಿದೆ. ಹೈಕೋರ್ಟ್ ತೀರ್ಪು ಏನಿದೆ ಅದನ್ನೇ ಸರ್ಕಾರ ಪಾಲಿಸುತ್ತದೆ ಎಂದು ಹೇಳಿದರು.