ಮನೆ ರಾಜಕೀಯ ಬೆಂಗಳೂರಿಗೆ ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ: ಭರವಸೆಗಳೇನಿದೆ ಗೊತ್ತಾ ?

ಬೆಂಗಳೂರಿಗೆ ಜೆಡಿಎಸ್ ಪ್ರತ್ಯೇಕ ಪ್ರಣಾಳಿಕೆ: ಭರವಸೆಗಳೇನಿದೆ ಗೊತ್ತಾ ?

0

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಜೆಡಿಎಸ್  ಪಕ್ಷವು ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ದಪಡಿಸಿದೆ.

Join Our Whatsapp Group

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಶುಕ್ರವಾರ ರಾತ್ರಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ ಪ್ರತೀ ವಾರ್ಡ್ ನಲ್ಲಿ ತಲಾ 30 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಾಣ, ಬಡವರಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಕಲ್ಪಿಸುವುದು, ಮೆಟ್ರೊ ರೈಲು ಮಾರ್ಗದ ವಿಸ್ತರಣೆ ಮತ್ತು ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೆಡಿಎಸ್ ಭರವಸೆ ನೀಡಿದೆ.

ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅಧ್ಯಕ್ಷತೆಯ ಸಮಿತಿ ಈ ಪ್ರಣಾಳಿಕೆಯನ್ನು ಸಿದ್ಧಪಡಿಸಿದೆ.

ಪ್ರಣಾಳಿಕೆ ಸಮಿತಿ ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎ. ತಿಪ್ಪೇಸ್ವಾಮಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಇದ್ದರು.

ಬೆಂಗಳೂರಿಗೆ ಜೆಡಿಎಸ್ ನೀಡಿರುವ ಪ್ರಮುಖ ಭರವಸೆಗಳು

  • ಖಾಸಗಿ ಶಾಲೆಗಳಲ್ಲಿ ದುಡಿಯುವ 10,000ಕ್ಕಿಂತ ಕಡಿಮೆ ವೇತನದ ಶಿಕ್ಷಕರಿಗೆ ಸಹಾಯಧನ.
  • ನಗರದ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು.
  • ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಿಗೆ ಕೊಳವೆ ಮಾರ್ಗದ ಮೂಲಕ ಕುಡಿಯುವ ನೀರು ಪೂರೈಕೆ.
  • ಸಭೆ ಸಮಾರಂಭಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ.
  • ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು.
  • ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಶಿಕ್ಷಣದಲಿ ಸುಧಾರಣೆ.
  • ಮದರಸಾ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿ
  • ಬೆಂಗಳೂರು ಸಾರ್ವಜನಿಕ ಆರೋಗ್ಯ ಮಂಡಳಿ ರಚನೆ.
  • ಎಲ್ಲ ವಾರ್ಡ್ ಗಳಲ್ಲೂ 30 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ
  • ಬೆಂಗಳೂರು ನಗರ ಮತ್ತು ಹೊರವಲಯ ಸೇರಿದಂತೆ ಸ್ಥಳೀಯ ರೈಲು ಯೋಜನೆ ಅನುಷ್ಠಾನ
  • ದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು