ಮನೆ ರಾಜ್ಯ ವಿಧಾನಸಭಾ ಚುನಾವಣೆ: ಮೇ 9 ಮತ್ತು 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ

ವಿಧಾನಸಭಾ ಚುನಾವಣೆ: ಮೇ 9 ಮತ್ತು 10 ರಂದು ಬಸ್ ಸಂಚಾರದಲ್ಲಿ ವ್ಯತ್ಯಯ

0

ಬೆಂಗಳೂರು: ಕರ್ನಾಟಕ ವಿಧಾನಭೆ ಚುನಾವಣೆ  ಹಿನ್ನೆಲೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Join Our Whatsapp Group

ಮೇ 10ರಂದು ರಾಜ್ಯದ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುವ ಹಿನ್ನೆಲೆ 10ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್’ಆರ್’​ಟಿಸಿ ಬಸ್​’ಗಳನ್ನು ನಿಯೋಜಿಸಲಾಗಿದೆ. ಪರಿಣಾಮ 9 ಮತ್ತು 10 ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್’​ಆರ್​’ಟಿಸಿ ಮನವಿ ಮಾಡಿದೆ.

ರಾಜ್ಯದಲ್ಲಿ ಒಟ್ಟು 8100 ಕೆಎಸ್​’ಆರ್’​ಟಿಸಿ ಬಸ್’​ಗಳಿದ್ದು, ಈ ಪೈಕಿ 3700 ಬಸ್​​’ಗಳು ಚುನಾವಣಾ ಡ್ಯೂಟಿಗೆ ಬುಕ್ ಆಗಿವೆ. ಮೇ 9 ಮತ್ತು 10 ರಂದು 4400 ಕೆಎಸ್’​ಆರ್’​ಟಿಸಿ ಬಸ್​’ಗಳು ಮಾತ್ರ ಸಂಚಾರ ಮಾಡುತ್ತವೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್’​ಆರ್​’ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.