ಮನೆ ರಾಜ್ಯ  SSLC Result 2023 Karnataka: ಈ ಬಾರಿ ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ., 625...

 SSLC Result 2023 Karnataka: ಈ ಬಾರಿ ಚಿತ್ರದುರ್ಗ ಪ್ರಥಮ, ಮಂಡ್ಯ ದ್ವಿತೀಯ ಸ್ಥಾನ., 625 ಕ್ಕೆ 625 ಅಂಕ ಪಡೆದವರು 4 ವಿದ್ಯಾರ್ಥಿಗಳು

0

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇದೀಗ ಸುದ್ದಿಗೋಷ್ಠಿ ಮೂಲಕ ಪ್ರಕಟ. ಪರೀಕ್ಷೆ ಬರೆದವರ ಪೈಕಿ ಶೇಕಡ.87 ಹುಡುಗಿಯರು, ಶೇಕಡ.80 ರಷ್ಟು ಹುಡುಗರು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಭಾಗದ ಶೇಕಡ.87 ವಿದ್ಯಾರ್ಥಿಗಳು, ನಗರ ಪ್ರದೇಶದ ಶೇಕಡ.79 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. SMS ಮೂಲಕ ಫಲಿತಾಂಶ ಚೆಕ್ ಮಾಡಬಹುದು. ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಎಸ್‌ಎಂಎಸ್‌ ಮೂಲಕ ನೋಡಬಹುದಾಗಿದೆ.ಮೇಸೆಜ್‌ನಲ್ಲಿ KAR10 ನಂತರ ನಿಮ್ಮ ರೋಲ್ ಸಂಖ್ಯೆಯನ್ನು ಟೈಪ್ ಮಾಡಿ.ನಂತರ, ಈ ಸಂದೇಶವನ್ನು 56263 ಗೆ ಕಳುಹಿಸಿ.ಫಲಿತಾಂಶ ನಿಮ್ಮ ಮೊಬೈಲ್ ಸಂಖ್ಯೆಗೆ ವಿದ್ಯಾರ್ಥಿಗಳಿಗೆ ಕಳುಹಿಸಲಾಗುತ್ತದೆ.

ಬೆಳಿಗ್ಗೆ 11 ಗಂಟೆಯಿಂದ ಆನ್‌ಲೈನ್‌ನಲ್ಲಿ ಫಲಿತಾಂಶ ಚೆಕ್‌ ಮಾಡಬಹುದು. ಈ ಬಾರಿ ಬಾಲಿಕಿಯರೇ ಮೇಲುಗೈ ಸಾಧಿಸಿದ್ದಾರೆ. ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಬಂದಿಲ್ಲ. ಸರ್ಕಾರಿ ಶಾಲೆಗಳಲ್ಲಿ 2,89,000 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ. ಶೇಕಡ.86 ರಷ್ಟು ಇದಾಗಿದೆ. ಖಾಸಗಿ ಶಾಲೆಗಳಲ್ಲಿ ಶೇಕಡ.90 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.

625 ಕ್ಕೆ 625 ಅಂಕ ಪಡೆದ 4 ವಿದ್ಯಾರ್ಥಿಗಳು. ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರ, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶ ಹಾಗೂ ಗೋಪಾಲಕೃಷ್ಣ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನ ಪ್ರಕಟಿಸಿದ್ದಾರೆ. 2023ರಲ್ಲಿ ಶೇ.83.89. ಫಲಿತಾಂಶ ದಾಕಲಾಗಿದ್ದು, 4 ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆಡಿದ್ದಾರೆ.

23 ಜಿಲ್ಲೆಗಳಿಗೆ A ಗ್ರೇಡ್. ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಕೊನೆಯ ಸ್ಥಾನದಲ್ಲಿ ಯಾದಗಿರಿ ಜಿಲ್ಲೆ ಇದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 23 ಜಿಲ್ಲೆಗಳು A ಗ್ರೇಡ್ ಪಡೆದರೆ, 12 ಜಿಲ್ಲೆಗಳು ಬಿ ಗ್ರೇಡ್ ಪಡೆದುಕೊಂಡಿವೆ. ಈ ಬಾರಿ 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ – 7,00,619.ಎಸ್​ಎಸ್​ಎಲ್‌ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕರ ಸಂಖ್ಯೆ – 3,41,108.ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾದ ಬಾಲಕಿಯರ ಸಂಖ್ಯೆ- 3,59,511.

11 ಶಾಲೆಗಳಲ್ಲಿ ಶೂನ್ಯ ಫಲಿತಾಂಶ. A+ ಗ್ರೇಡ್‌ನಲ್ಲಿ ಶೇಕಡ.8.83 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. A ಗ್ರೇಡ್‌ನಲ್ಲಿ ಶೇಕಡ.21 ರಷ್ಟು ವಿದ್ಯಾರ್ಥಿಗಳು, B+ ಗ್ರೇಡ್‌ನಲ್ಲಿ ಶೇಕಡ.25 ರಷ್ಟು ವಿದ್ಯಾರ್ಥಿಗಳು, A ಗ್ರೇಡ್‌ನಲ್ಲಿ ಶೇಕಡ.21 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಸರ್ಕಾರಿ ಶಾಲೆಗಳಲ್ಲಿ ಶೇಕಡ.100 ಫಲಿತಾಂಶ ಬಂದಿದೆ. ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ಬಂದಿರುವುದಿಲ್ಲ.

ಉತ್ತರ ಪತ್ರಿಕೆ ಇಂದಿನಿಂದಲೇ ಲಭ್ಯ

ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗೆ ಇಂದಿನಿಂದಲೇ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದೆ. ಮೇ 14 ರವರೆಗೆ ಅರ್ಜಿ ಸಲ್ಲಿಸಿ ಪಡೆಯಬಹುದು. ಹಂತ ಹಂತವಾಗಿ ಅರ್ಜಿ ಸ್ವೀಕಾರಗೊಂಡ ನಂತರ ಸ್ಕ್ಯಾನ್‌ ಕಾಪಿಗಳನ್ನು ಅಪ್‌ಲೋಡ್‌ ಮಾಡಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್‌ ಮೂಲಕವೇ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ಕುರಿತು ಎಸ್‌ಎಂಎಸ್‌ ಸಹ ಕಳುಹಿಸಲಾಗುತ್ತದೆ. ನೋಡಿಕೊಂಡ ನಂತರ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಕಳುಹಿಸಬಹುದು.