ಮನೆ ಸುದ್ದಿ ಜಾಲ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ

0

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಹಾಸನ, ಮೈಸೂರು, ತುಮಕೂರು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಲಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆಯಾಗಲಿದೆ. ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು ಗುಡುಗು ಸಹಿತ ಮಳೆಯಾಗಲಿದೆ.  ಭಾರತದ ದಕ್ಷಿಣ ರಾಜ್ಯಗಳಾದ ಕೇರಳ, ಆಂಧ್ರ, ತಮಿಳುನಾಡು, ಕರ್ನಾಟಕ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ವಾರದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.