ಕರ್ನಾಟಕ ವಿಧಾನಸಭಾ ಚುನಾವಣೆ (Karnataka Assembly Elections 2023) ನಾಳೆ ಒಂದು ದಿನವಷ್ಟೇ ಬಾಕಿ ಇದೆ. ಮೇ 10ರಂದು ಮತದಾನ ನಡೆಯಲಿದ್ದು, ಭಾರೀ ಪೊಲೀಸ್ ಭದ್ರತೆ (Police Security) ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ (Alok Kumar), ಚುನಾವಣೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಚುನಾವಣೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ರಾಜ್ಯಾದ್ಯಂತ ಒಟ್ಟು 1.60 ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.
ಭದ್ರತಾ ಕಾರ್ಯದಲ್ಲಿ 304 ಡಿವೈಎಸ್ಪಿ, 991 ಪೊಲೀಸ್ ಇನ್ಸ್ಪೆಕ್ಟರ್, 2,610 ಪಿಎಸ್ಐ, 5,803 ಎಎಸ್ಐ ಸೇರಿದಂತೆ 84,000 ಸಿಬ್ಬಂದಿ ನಿಯೋಜನೆ ಮಾಡಿದ್ದೇವೆ. ಇವರೊಂದಿಗೆ 8.5 ಸಾವಿರ ಹೋಂ ಗಾರ್ಡ್ಗಳನ್ನು, 650 ಸಿಆರ್ಪಿಎಫ್ ತುಕಡಿ, ಕೆಎಸ್ಆರ್ಪಿ ತುಕಡಿಗಳ ನಿಯೋಜನೆ ಮಾಡಲಾಗಿದೆ. ಹೆಚ್ಚಿನ ಭದ್ರತೆಗಾಗಿ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ಗೋವಾ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂದೆ ಯಾವತ್ತು ನಿಯೋಜಿಸಿರಲಿಲ್ಲ, ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ ನಿಯೋಜನೆ ಮಾಡಲಾಗಿದೆ ಎಂದರು.
ಸೂಕ್ಷ್ಮ ಮತಗಟ್ಟೆಗಳ ಮಾಹಿತಿ
ಸೂಕ್ಷ್ಮ ಮತಗಟ್ಟೆ, ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆ ಹೆಚ್ಚಿಸಿದ್ದೇವೆ ಎಂದು ಹೇಳಿದ ಅಲೋಕ್ ಕುಮಾರ್, ವರುಣಾ, ಚಾಮುಂಡೇಶ್ವರಿ, ಹಾಸನ, ಚನ್ನಪಟ್ಟಣ ಕಡೆ ಹೆಚ್ಚಿನ ನಿಗಾ ಇರಿಸಲಾಗಿದೆ. ಯಾವುದೇ ಅಹಿತಕರ ಘಟನೆ ಆಗಬಾರದೆಂದು ಐಪಿಎಸ್ ಅಧಿಕಾರಿಗಳ ಮೂಲಕ 5 ದಿನಗಳಿಂದ ನಿಗಾ ಇಡಲಾಗಿದೆ. 11,617 ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿ ಪರಿಗಣಿಸಿದ್ದೇವೆ ಎಂದರು.
ಚುನಾವಣೆ ಘೋಷಣೆ ನಂತರ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಅಲ್ಲಲ್ಲಿ ಚೆಕ್ಪೋಸ್ಟ್ಗಳನ್ನು ಹಾಕಿ ತಪಾಸಣೆ ನಡೆಸಿ ಅಕ್ರಮವಾಗಿ ಅಥವಾ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ವಸ್ತುಗಳನ್ನು ಹಾಗೂ ಹಣವನ್ನು ವಶಕ್ಕೆ ಪಡೆದಿದ್ದಾರೆ. ಈವರೆಗೆ ಒಟ್ಟು 230 ಕೋಟಿ ಮೌಲ್ಯದ ವಸ್ತುಗಳನ್ನು ಹಾಗೂ 105 ಕೋಟಿ ನಗದು ವಶಕ್ಕೆ ಪಡೆಯಲಾಗಿದೆ. ಇಂದು ಮತ್ತು ನಾಳೆ ಸಹ ಹಣ ಸಾಗಾಟದ ಬಗ್ಗೆ ನಿಗಾ ಇಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಈವರೆಗೆ 53,406 ವ್ಯಕ್ತಿಗಳ ವಿರುದ್ಧ ಬಾಂಡ್ ಓವರ್ ಮಾಡಲಾಗಿದೆ. ಭದ್ರತಾ ಪ್ರಕರಣ ಉಲ್ಲಂಘಿಸಿದ 115 ಪ್ರಕರಣ ದಾಖಲಿಸಲಾಗಿದೆ. 1.57 ಕೋಟಿ ಹಣ ಮುಟ್ಟುಗೋಲುಗೆ ಕ್ರಮ ಕೈಗೊಳ್ಳಲಾಗಿದೆ. 714 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.