ಮನೆ ರಾಜಕೀಯ ನಾಲ್ಕು ಜನ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತಾ? ಬಸವರಾಜ ಬೊಮ್ಮಾಯಿ ಪ್ರಶ್ನೆ

ನಾಲ್ಕು ಜನ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತಾ? ಬಸವರಾಜ ಬೊಮ್ಮಾಯಿ ಪ್ರಶ್ನೆ

0

ನಮ್ಮ ಮೇಲೆ ಮಾಡಿರುವ ಭ್ರಷ್ಟಾಚಾರದ ಆರೋಪ ಕುರಿತು ದಾಖಲೆ‌ ಕೊಡಿ ಎಂದು ಚುನಾವಣಾ ಆಯೋಗ ಕೇಳಿದೆ. ಆದರೆ, ಕಾಂಗ್ರೆಸ್‌ನವರಿಗೆ ದಾಖಲೆ ಕೊಡಲು ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ವಿರುದ್ಧ ಇದುವರೆಗೆ ಯಾವುದೇ ಕೇಸ್ ಇಲ್ಲ, ಸಾಕ್ಷಿನೂ ಇಲ್ಲ. ಇಷ್ಟೆಲ್ಲಾ ಮಾತನಾಡುವ ಕಾಂಗ್ರೆಸ್‌ ನಾಯಕರ ಮೇಲೆ ಭ್ರಷ್ಟಾಚಾರ ಕೇಸ್’ಗಳಿವೆ. ಕೋರ್ಟ್‌ಗೆ ಅಲೆದಾಡುತ್ತಿದ್ದಾರೆ. ಯಾವ ನೈತಿಕತೆಯಿಂದ ನಮ್ಮನ್ನು ಪ್ರಶ್ನಿಸುತ್ತಾರೆ ಎಂದು ಕಿಡಿ ಕಾರಿದರು.

ವೀರಶೈವ ಸಮಾಜ ದೊಡ್ಡದಿದ್ದು ಯಾವುದೇ ಸಂಸ್ಥೆಯ ಅಡಿಯಲ್ಲಿ ಅದು ಇಲ್ಲ. ವೀರಶೈವ ಮಹಾಸಭಾ ಅಧ್ಯಕ್ಷರಿಗೆ ನಾವು ಗೌರವ ಕೊಡುತ್ತೇವೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಒಂದು ಪಕ್ಷಕ್ಕೆ ಸಂಸ್ಥೆ ಹೆಸರು ಬಳಸುವುದು ಸರಿಯಲ್ಲ. ಲಿಂಗಾಯತ ವೇದಿಕೆ ಎನ್ನುವುದು ಎಲ್ಲಿಯೂ ಇಲ್ಲ. ಅದು ಒಂದು ಕಾಲ್ಪನಿಕ ಸಂಘಟನೆ, ನಾಲ್ಕು ಜನ ಸೇರಿ ಏನೋ ಹೇಳಿದ್ರೆ ಅದು ಲಿಂಗಾಯತರ ಧ್ವನಿ ಆಗುತ್ತಾ? ಲಿಂಗಾಯತ ಸಮಾಜ ಎನ್ನುವುದು ಸಮುದ್ರ ಇದ್ದಂತೆ. ಇಲ್ಲಿ ಲಿಂಗಾಯತ ವೇದಿಕೆ ಚುನಾವಣೆ ಸಂದರ್ಭಗಳಲ್ಲಿ ಹುಟ್ಟಿಕೊಂಡ ಸಂಘಟನೆ ಮಾಡಲಾಗುತ್ತಿದೆ ಇದರಿಂದಾಗಿ ಯಾವುದೇ ಪರಿಣಾಮ ಬೀರಲ್ಲ ಎಂದರು.