ಬೆಂಗಳೂರು: ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ ಬರುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 5 ರಂದು ರಾಜ್ಯಕ್ಕೆ ಬರುವ ನಿರೀಕ್ಷೆ ಇದ್ದು, ಇನ್ನೂ ಅಧೀಕೃತಗೊಳ್ಳಬೇಕಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಏಪ್ರಿಲ್ 1 ಕ್ಕೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿಲಿದ್ದಾರೆ. ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ದೆಹಲಿಯಿಂದ ಕರೆ ಬರುವ ನಿರೀಕ್ಷೆಯಿದೆ ಎಂದು ಸಿಎಂ ಹೇಳಿದ್ದಾರೆ.