ಮನೆ ರಾಷ್ಟ್ರೀಯ ಗೋಲ್ಡನ್ ಟೆಂಪಲ್ ಬಳಿ ಸ್ಫೋಟ: ಐವರ ಬಂಧನ

ಗೋಲ್ಡನ್ ಟೆಂಪಲ್ ಬಳಿ ಸ್ಫೋಟ: ಐವರ ಬಂಧನ

0
ಸಾಂದರ್ಭಿಕ ಚಿತ್ರ

ಅಮೃತಸರ: ಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್‌ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಐವರನ್ನು ಬಂಧಿಸಲಾಗಿದೆ.

Join Our Whatsapp Group

ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದ್ದು, ಇದರಿಂದ ಸ್ಥಳೀಯ ಜನತೆ ಆತಂಕಕ್ಕೀಡಾಗಿದ್ದಾರೆ.

ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೇ 6 ರಂದು ಮೊದಲ ಸ್ಫೋಟ ಸಂಭವಿಸಿದ್ದು, ಕಳೆದ ಸೋಮವಾರ ಎರಡನೆ ಸ್ಫೋಟ ಸಂಭವಿಸಿದೆ. ಇಂದು ನಡೆದ ಕಡಿಮೆ ತೀವ್ರತೆಯ ಸ್ಫೋಟದ ಸ್ಥಳವು ನಗರದ ಜನಪ್ರಿಯ ಪ್ರವಾಸಿ ತಾಣವಾದ ಗೋಲ್ಡನ್ ಟೆಂಪಲ್ ಬಳಿಯ ಹೆರಿಟೇಜ್ ಸ್ಟ್ರೀಟ್‌ನಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌’ಐಎ) ಮತ್ತು ಪಂಜಾಬ್ ಪೊಲೀಸರು ಸ್ಫೋಟದ ಸ್ಥಳದಲ್ಲಿ ವಿಧಿವಿಜ್ಞಾನ ಮಾದರಿಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ತನಿಖೆ ಮುಂದುವರೆಸಿದ್ದಾರೆ.