ಪಾಲಿಸೆ ಎನ್ನ ಶ್ರೀಮಹಾಲಕ್ಷ್ಮಿ
ಪಾಲಿಸೆ ಎನ್ನನು ಪಾಲಾಬ್ಧಿ ಸಂಜಾತೆ ||
ಲಲಿತಾಂಗಿ ಶುಭೆ ದೇವಿ ಮಂಗಳೆ ದೇವಿ ||
ವೇದಾಭಿಮಾನಿ ಸಾರಸಾಕ್ಷಿ
ಶ್ರೀಧರರಮಣಿ |
ಕಾದುಕೊ ನಿನ್ನಯ ಪಾದಸೇವಕರನ್ನು
ಆದಿಶಕ್ತಿ ಸರ್ವಾಧಾರೆ ಗುಣಪೂರ್ಣೆ||
ದಯದಿಂದ ನೋಡೆ ಭಜಿಪ ಭಕ್ತರ
ಭಯ ದೂರ ಮಾಡೆ |
ದಯಪಾಲಿಸೆ ಮಾತೆ ತ್ರೈಲೋಕ್ಯ ವಿಖ್ಯಾತೆ
ಜಯದೇವಿ ಸುವ್ರತೆ ಜಗದೀಶನ ಪ್ರೀತೆ||
ನೀನಲ್ಲದನ್ಯ ರಕ್ಷಿಪರನು
ಕಾಣೆ ನಾ ಮುನ್ನ |
ದಾನವಾಂತಕ ಸಿರಿ ಪುರಂದರವಿಠಲನ
ಧ್ಯಾನಿಪ ಭಕುತರ ಮಾನ ನಿನ್ನದು ತಾಯೆ ||