ಮನೆ ರಾಜಕೀಯ ಯಾವುದೇ ಕಾರಣಕ್ಕೂ ಮೈತ್ರಿ ಸಂದರ್ಭ ನಿರ್ಮಾಣವಾಗಲ್ಲ: ಸಿಎಂ ಬೊಮ್ಮಾಯಿ

ಯಾವುದೇ ಕಾರಣಕ್ಕೂ ಮೈತ್ರಿ ಸಂದರ್ಭ ನಿರ್ಮಾಣವಾಗಲ್ಲ: ಸಿಎಂ ಬೊಮ್ಮಾಯಿ

0

ಬೆಂಗಳೂರು: ನಮಗೆ ಸಂಪೂರ್ಣ ಬಹುಮತ ಸಿಗಲಿದೆ. ನಾವು ಮ್ಯಾಜಿಕ್ ನಂಬರ್ ತಲುಪುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಸಂದರ್ಭ ನಿರ್ಮಾಣವಾಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Join Our Whatsapp Group

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸಿಟ್ ಪೋಲ್​ನಲ್ಲಿ ಏನೇ ಸಮೀಕ್ಷೆ ಬರಲಿ. ಆದರೆ ನಮಗೆ ಗೆಲ್ಲುವ ವಿಶ್ವಾಸ ಇದೆ. ನಾನೇ ವರಿಷ್ಠರಿಗೆ ಕರೆ ಮಾಡಿ ಇಲ್ಲಿನ ವಸ್ತುಸ್ಥಿತಿ ತಿಳಿಸಿದ್ದೇನೆ. ಹೈಕಮಾಂಡ್ ನಾಯಕರು ಬಿಜೆಪಿ ಸರ್ಕಾರ ರಚಿಸುವ ವಿಶ್ವಾಸದಲ್ಲಿದಾರೆ ಎಂದರು.

ಕಾಂಗ್ರೆಸ್​ನವರಿಗೆ ಬಹುಮತ ಬರಲ್ಲ, ಹಾಗಾಗಿ ಬೇರೆ ಪಕ್ಷದವರ ಜೊತೆ ಮಾತಾಡೋ ಪ್ರಯತ್ನ ಮಾಡುತ್ತಿದ್ದಾರೆ.ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲ ಎಂದು ಹೇಳಿದರು.

ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ ಎನ್ನುವ ವರದಿಗಳು ಬಂದ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಅವಲೋಕನ ನಡೆಸಿದರು. ಮುಂದಿನ ರಾಜಕೀಯ ಲೆಕ್ಕಾಚಾರದ ಕುರಿತು ಚರ್ಚಿಸಿದರು.

ಕುಮಾರಪಾರ್ಕ್ ನಲ್ಲಿರುವ ಯಡಿಯೂರಪ್ಪ ಅಧಿಕೃತ ನಿವಾಸ ಕಾವೇರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಪ್ರಸ್ತುತ ಮತದಾನೋತ್ತರ ಸಮೀಕ್ಷೆಗಳ ವರದಿ ಕುರಿತು ಚರ್ಚೆ ನಡೆಸಿದರು.

ಪಕ್ಷ ಸಂಗ್ರಹ ಮಾಡಿರುವ ಅಂಕಿ ಅಂಶಗಳು, ಬೂತ್ ಪ್ರಮುಖರಿಂದ ಪಡೆದ ವರದಿ ಜೊತೆಗೆ ಸಮೀಕ್ಷಾ ವರದಿಗಳ ತಾಳೆ ನೋಡಿ ಚರ್ಚಿಸಿದರು.

ಚುನಾವಣೆ ನಂತರ ಯಡಿಯೂರಪ್ಪ ನಿವಾಸದಲ್ಲಿ ನಡೆದ ಮೊದಲ ಸಭೆ ಇದಾಗಿದ್ದು, ರಾಜಕೀಯವಾಗಿ ಬಿಜೆಪಿ ಮುಂದಿಡಬೇಕಾದ ಹೆಜ್ಜೆಗಳ ಕುರಿತು ಚರ್ಚಿಸಿದರು.

ಬಿಎಸ್​ವೈ ಜೊತೆ ಸಿಎಂ ಚರ್ಚೆ ವೇಳೆ ಸಚಿವರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್, ರಾಜ್ಯಸಭಾ ಸದಸ್ಯ ಹಾಗು ಬಿಎಸ್​’ವೈ ಆಪ್ತ ಲಹರ್ ಸಿಂಗ್ ಉಪಸ್ಥಿತರಿದ್ದರು.