ರಾಮನಗರ: ಕನಕಪುರ ಬಂಡೆ ಎಂದೇ ಖ್ಯಾತರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 8ನೇ ಬಾರಿಗೆ ಅಭೂತ ಪೂರ್ವ ಗೆಲುವು ದಾಖಲಿಸಿದ್ದಾರೆ.
ಬಿಜೆಪಿಯಿಂದ ಕಂದಾಯ ಸಚಿವರಾಗಿದ್ದ ಆರ್.ಅಶೋಕ್ ಅವರನ್ನು ಡಿ ಕೆ.ಶಿವಕುಮಾರ್ ವಿರುದ್ಧ ಕಣಕ್ಕಿಳಿಸಲಾಗಿತ್ತು. ಆದರೆ ಡಿಕೆಶಿ 50 ಸಾವಿರ ಮತದ ಅಂತರದಿಂದ ಗೆದ್ದಿದ್ದಾರೆ.
ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್ ರಾಜ್ಯ ರಾಜಕೀಯದಲ್ಲಿ ತಮ್ಮದೇ ವರ್ಚಸ್ಸು ಹೊಂದಿರುವ ಜನ ನಾಯಕರಾಗಿದ್ದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಆಗಿರುವ ಅವರು, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ. ಕಾಂಗ್ರೆಸ್ ಹೈಕಮಾಂಡ್ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಅವರು, ಮುಖ್ಯಮಂತ್ರಿ ಆಗುವ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ.