ಬೆಂಗಳೂರು: ರಾಜ್ಯದ ಜನತೆ ನೀಡಿರುವ ಆದೇಶವನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಪಕ್ಷವನ್ನು ಆಶೀರ್ವದಿಸಿದ ಜನತೆಗೆ ಮಾಜಿ ಮುಖ್ಯಮಂತ್ರಿ ಅಭಿನಂದನೆ ಸಲ್ಲಿಸಿದ್ದಾರೆ. ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಗಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.