ಮನೆ ಸುದ್ದಿ ಜಾಲ ಬೆಂಗಳೂರು-ಮೈಸೂರು 10 ಪಥದ ರಸ್ತೆ ಕುರಿತು ಸಚಿವ ನಿತಿನ್ ಗಡ್ಕರಿ ಟ್ವೀಟ್

ಬೆಂಗಳೂರು-ಮೈಸೂರು 10 ಪಥದ ರಸ್ತೆ ಕುರಿತು ಸಚಿವ ನಿತಿನ್ ಗಡ್ಕರಿ ಟ್ವೀಟ್

0

ಬೆಂಗಳೂರು: ಬೆಂಗಳೂರು-ಮೈಸೂರು ನಡುವಿನ 10 ಪಥದ ರಸ್ತೆ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು, 8,350 ಕೋಟಿ ರೂ.ಗಳ ಯೋಜನೆ ಇದಾಗಿದೆ.

ಸೋಮವಾರ ಯೋಜನೆಯ ಚಿತ್ರಗಳನ್ನು ಹಾಗೂ  ವಿವರಗಳನ್ನು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಟ್ವೀಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

ಬೆಂಗಳೂರು-ನಿಢಗಟ್ಟ-ಮೈಸೂರು ರಾಷ್ಟ್ರೀಯ ಹೆದ್ದಾರಿ 275 10 ಪಥದ 117 ಕಿ. ಮೀ. ಯೋಜನೆಯಾಗಿದೆ. 8,350 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಅಕ್ಟೋಬರ್ 2022ರೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಈ ಯೋಜನೆ ಪೂರ್ಣಗೊಂಡ ಬಳಿಕ ಬೆಂಗಳೂರು-ಮೈಸೂರು ನಡುವಿನ ಪ್ರಯಾಣದ ಅವಧಿ 3 ಗಂಟೆಯಿಂದ 75 ನಿಮಿಷಗಳಿಗೆ ಇಳಕೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ಯೋಜನೆ ಪೂರ್ಣಗೊಂಡ ಬಳಿಕ ಉಭಯ ನಗರಗಳ ನಡುವಿನ ಸಂಪರ್ಕ ಉತ್ತಮವಾಗಲಿದ್ದು, ಇದರಿಂದಾಗಿ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಸಹಕಾರಿಯಾಗಲಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ಈ ಯೋಜನೆಯಡಿ 9 ಪ್ರಮುಖ ಸೇತುವೆ. 42 ಚಿಕ್ಕ ಸೇತುವೆಗಳು, 64 ಅಂಡರ್ ಪಾಸ್, 11 ಓವರ್ ಪಾಸ್‌, 4 ಆರ್‌ಓಬಿಗಳು, 5 ಬೈಪಾಸ್‌ಗಳು ಇವೆ ಎಂದು ಸಚಿವರು ಯೋಜನೆ ಕುರಿತು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂತಹ ಹಲವು ಮೂಲ ಸೌಕರ್ಯ ಯೋಜನೆಗಳು ಘೋಷಣೆಯಾಗಿವೆ. ಜವಾಬ್ದಾರಿಯುತವಾಗಿ ಅವುಗಳನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.