ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ಮತ್ತು ನೂತನ ವೇತನ ಶ್ರೇಣಿ ರಚಿಸುವ ಉದ್ದೇಶದಿಂದ ನಿವೃತ್ತ ಸಿ.ಎಸ್.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ 7ನೇ ರಾಜ್ಯ ವೇತನ ಆಯೋಗದ ಅವಧಿ ವಿಸ್ತರಣೆ ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ ಮೇ 19ರಿಂದ 6 ತಿಂಗಳ ಕಾಲ ಆಯೋಗದ ಅವಧಿ ವಿಸ್ತರಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ. 2022ರ ನ. 19ರಂದು ವೇತನ ಆಯೋಗ ರಚನೆಯಾಗಿತ್ತು. ಆಯೋಗದ ಶಿಫಾರಸ್ಸು ಆಧರಿಸಲು ಮುಂದಿನ ಕ್ರಮ ಕೈಗೊಳ್ಳಲು 2023-24ನೇ ಸಾಲಿನಲ್ಲಿ ಹಣವನ್ನೂ ತೆಗೆದಿಡಲಾಗಿತ್ತು.