ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಯೂಸೂಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬುಗೆ ವಿಚಾರಣೆಗೆ ಹಾಜರಾಗುವಂತೆ ಕೆಜಿಎಫ್ ಬಾಬುಗೆ ಇಡಿ ನೋಟಿಸ್ ನೀಡಿದೆ.
ಇಂದು ದೆಹಲಿಯ ಇಡಿ ಕಚೇರಿಯಲ್ಲಿ ಕೆಜಿಎಫ್ ಬಾಬು ವಿಚಾರಣೆಗೆ ಹಾಜರಾಗಲಿದ್ದಾರೆ. ಕೆಜಿಎಫ್ ಬಾಬು ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಗೆ ಕೆಲ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಬಾಬು ಒಡೆತನದ ವಸಂತನಗರದಲ್ಲಿರುವ ರುಕ್ಸಾನಾ ಪ್ಯಾಲೇಸ್ ನಿವಾಸ, ಉಮ್ರಾ ಡೆವಲರ್ಸ್, ಉಮ್ರಾ ರಿಯಲ್ ಎಸ್ಟೇಟ್ ಕಂಪನಿಗಳ ಮೇಲೆ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡವು ದಾಳಿ ನಡೆಸಿ ದಾಖಲೆಗಳನ್ನು ಜಾಲಾಡಿದ್ದರು.
ಬಾಬು ಅವರ ಹಲವು ಕಡೆಗಳ ನೂರಾರು ಕೋಟಿ ರೂ. ಮೌಲ್ಯದ ಜಮೀನು, ನಿವೇಶನ, ಅಪಾರ್ಟ್’ಮೆಂಟ್, ಕಟ್ಟಡಗಳನ್ನು ಹೊಂದಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಇಡಿ ಕೈ ಸೇರಿದೆ.
ಮೊದಲ ಪತ್ನಿ ರುಕ್ಸಾನ, ಎರಡನೆ ಪತ್ನಿ ಶಾಜಿಯಾ, ಮಗಳು ಉಮ್ರಾ ಫರೀಫ್, ಮಗ ಅಫ್ನಾನ್ ಸೇರಿ ಕುಟುಂಬಸ್ಥರ ಹೆಸರಿನಲ್ಲಿ ಒಟ್ಟು 23 ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ. ಬಾಬು ತಮ್ಮ ಹೆಸರಿನಲ್ಲಿ 12 ಬ್ಯಾಂಕ್’ಗಳಲ್ಲಿ ಖಾತೆ ಹೊಂದಿದ್ದಾರೆ. ಕುಟುಂಬಸ್ಥರ ಖಾತೆಯಲ್ಲಿ 70 ಕೋಟಿಗೂ ಅಧಿಕ ಹಣ ಇರುವುದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.
ಇಡಿ ಅಕ್ರಮ ಹಣದ ವರ್ಗಾವಣೆ ಬಗ್ಗೆ ತನಿಖೆ ನಡೆಸುತ್ತಿದೆ.