ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ 6 ರಾಜ್ಯಗಳು ಸೇರಿದಂತೆ ನೂರು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆಯಿಂದ ಶೋಧ ಕಾರ್ಯ ನಡೆಸುತ್ತಿದೆ.
ಹರಿಯಾಣ, ಪಂಜಾಬ್, ಉತ್ತರಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ವಿವಿಧೆಡೆ ಶೋಧ ಕಾರ್ಯ ನಡೆಯುತ್ತಿದೆ.
ಗ್ಯಾಂಗ್ ಸ್ಟರ್’ಗಳು, ಮಾದಕ ವಸ್ತು ಸಾಗಣೆಯಲ್ಲಿ ತೊಡಗಿರುವವರು, ಉಗ್ರ ಚಟುವಟಿಕೆಗಳಲ್ಲಿ ತೊಡಿಸಿಕೊಂಡವರು ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡವರ ಮೇಲೆ ದಾಳಿ ಮಾಡಲಾಗಿದೆ ಎಂದು ಎನ್ಐಎ ಅಧಿಕಾರಿಗಳು ಹೇಳಿದ್ದಾರೆ.
ಕಚೇರಿ, ನಿವಾಸಗಳನ್ನು ಮೇಲೆ ದಾಳಿ ಮಾಡಲಾಗಿದ್ದು ಕೆಲವರನ್ನು ಬಂಧಿಸಲಾಗಿದೆ. ದಾಳಿ ಸಂದರ್ಭದಲ್ಲಿ ಸಿಕ್ಕ ದಾಖಲೆ ಪತ್ರಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆಲವರ ಬಳಿ ಇದ್ದ ಸುಧಾರಿತ ಸ್ಪೋಟಕಗಳು, ಗನ್ ಗಳು ಸೇರಿದಂತೆ ಆರ್ ಡಿಎಕ್ಸ್ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ.