ಇಷ್ಟು ದಿನ ಅವರು ವಿವಿಧ ಕಡೆಗಳಲ್ಲಿ ತೆರಳಿ ಚುನಾವಣೆ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ನಾಯಕರಿಗೆ ಬೆಂಬಲ ಕೊಟ್ಟಿದ್ದರು. ಈಗ ಚುನಾವಣೆ ಮುಗಿದಿದೆ. ಹೀಗಾಗಿ, ಅವರು ಮರಳಿ ಸಿನಿಮಾ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ. ಈಗ ಶಿವರಾಜ್ ಕುಮಾರ್ ಅವರು ತೆಲುಗು ನಟ ರವಿತೇಜಗೆ ಸಾಥ್ ಕೊಟ್ಟಿದ್ದಾರೆ.
ಈ ವಿಚಾರವನ್ನು ಚಿತ್ರತಂಡದವರೇ ಅಧಿಕೃತ ಮಾಡಿದ್ದಾರೆ. ಹೌದು, ರವಿತೇಜ ನಟಿಸುತ್ತಿರುವ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಟೈಗರ್ ನಾಗೇಶ್ವರ್ ರಾವ್’ ಫಸ್ಟ್ ಲುಕ್ ಶೀಘ್ರವೇ ರಿಲೀಸ್ ಆಗಲಿದ್ದು, ಕನ್ನಡ ವರ್ಷನ್’ಗೆ ಶಿವಣ್ಣನ ಧ್ವನಿ ಇರಲಿದೆ.
ಇತ್ತೀಚೆಗೆ ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚುತ್ತಿದೆ. ಅನೇಕ ಸ್ಟಾರ್ ಹೀರೋಗಳು ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ಗಮನ ಸೆಳೆಯುತ್ತಿದ್ದಾರೆ. ರವಿತೇಜ ಕೂಡ ಇದೇ ಪ್ರಯೋಗಕ್ಕೆ ಇಳಿದಿದ್ದಾರೆ.
‘ಧಮಾಕ’ ಚಿತ್ರದ ಮೂಲಕ ಗೆದ್ದು ಬೀಗಿರುವ ಅವರು, ಈಗ ‘ಟೈಗರ್ ನಾಗೇಶ್ವರ್ ರಾವ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಫಸ್ಟ್’ಲುಕ್ ಮೇ 24ರಂದು ಐದು ಭಾಷೆಗಳಲ್ಲಿ ಅನಾವರಣಗೊಳ್ಳಲಿದೆ. ಕನ್ನಡ ವರ್ಷನ್’ಗೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದಾರೆ.
ಶಿವರಾಜ್ ಕುಮಾರ್ ಅವರು ಈ ಮೊದಲು ಅನೇಕ ಟ್ರೇಲರ್ ಹಾಗೂ ಟೀಸರ್ಗೆ ಧ್ವನಿ ನೀಡಿದ್ದರು. ಈಗ ಅವರು ‘ಟೈಗರ್ ನಾಗೇಶ್ವರ್ ರಾವ್’ ಫಸ್ಟ್ಲುಕ್ಗೆ ಧ್ವನಿ ಆಗಿದ್ದಾರೆ ಅನ್ನೋದು ವಿಶೇಷ. 70ರ ದಶಕದಲ್ಲಿ ಹೈದರಾಬದ್ನ ಹಳ್ಳಿಯೊಂದರಲ್ಲಿ ಕಳ್ಳ ಇದ್ದ. ಈತನ ಕುಖ್ಯಾತಿ ರಾಜ್ಯಾದ್ಯಂತ ಹಬ್ಬಿತ್ತು. ಈ ಕಥೆಯನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ.
‘ಟೈಗರ್ ನಾಗೇಶ್ವರ್ ರಾವ್’ ಚಿತ್ರವನ್ನು ಅಭಿಷೇಕ್ ಅಗರ್ ವಾಲ್ ನಿರ್ಮಾಣ ಮಾಡುತ್ತಿದ್ದಾರೆ. ಈ ಮೊದಲು ‘ದಿ ಕಾಶ್ಮೀರ್ ಫೈಲ್ಸ್’ ಹಾಗೂ ‘ಕಾರ್ತಿಕೇಯ 2’ ಚಿತ್ರಗಳನ್ನು ನೀಡಿರುವ ಖ್ಯಾತಿ ಅವರಿಗೆ ಇದೆ. ಈಗ ಅವರು ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಅಡಿ ಅದ್ದೂರಿಯಾಗಿ ನಿರ್ಮಿಸಿದ್ದಾರೆ.
ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ‘ಟೈಗರ್ ನಾಗೇಶ್ವರ್ ರಾವ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಆರ್. ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ. ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಗೆ ಇದೆ. ದಸರಾ ಪ್ರಯುಕ್ತ ಅಕ್ಟೋಬರ್ 22ರಂದು ವಿಶ್ವಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.