ಮನೆ ಅಪರಾಧ ಅನೈತಿಕ ಸಂಬಂಧದ ಶಂಕೆ: ಪತ್ನಿ ಮಲಗಿದ್ದಾಗ ಕತ್ತು ಹಿಸುಕಿ ಕೊಂದ ಪತಿ

ಅನೈತಿಕ ಸಂಬಂಧದ ಶಂಕೆ: ಪತ್ನಿ ಮಲಗಿದ್ದಾಗ ಕತ್ತು ಹಿಸುಕಿ ಕೊಂದ ಪತಿ

0

ಯಾದಗಿರಿ: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

Join Our Whatsapp Group

ತಾಲೂಕಿನ ದೋರನಹಳ್ಳಿ ಗ್ರಾಮದ ನಿವಾಸಿ ಲಕ್ಷ್ಮಿ ನಿಂಗಪ್ಪ ಕ್ವಾಣಿ (38) ಕೊಲೆಯಾದ ಮಹಿಳೆ.

ಕೊಲೆ ಆರೋಪಿ ನಿಂಗಪ್ಪ ಮಲ್ಲಪ್ಪ ಕ್ವಾಣಿ(43) ಕೊಲೆ ಮಾಡಿದ ಬಳಿಕ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ.

ಕೌಟುಂಬಿಕ ಕಲಹ ಹಿನ್ನೆಲೆ ಎರಡು ವರ್ಷಗಳಿಂದ ಪತಿ ಪತ್ನಿ ದೂರವಿದ್ದರು. ಮಗಳ ಮದುವೆ ಅಂತ ಪತಿ ನಿಂಗಪ್ಪ ಮನೆಗೆ ವಾಪಸ್ ಬಂದಿದ್ದ. ಮನೆಗೆ ಬಂದವವೇ ಮಂಗಳವಾರ ರಾತ್ರಿ ಮಲಗಿದ್ದಾಗ ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಸ್ಥಳಕ್ಕೆ ಶಹಾಪುರ‌ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.