ಮನೆ ರಾಜಕೀಯ ಮಣ್ಣಿನ ಮಗ ಹೆಚ್.ಡಿ.ದೇವೇಗೌಡ ಅವರ ಜನ್ಮದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

ಮಣ್ಣಿನ ಮಗ ಹೆಚ್.ಡಿ.ದೇವೇಗೌಡ ಅವರ ಜನ್ಮದಿನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ಶುಭಾಶಯ

0

ಬೆಂಗಳೂರು: ಮಣ್ಣಿನ ಮಗ ಎಂದೇ ಪ್ರಖ್ಯಾತಿ ಪಡೆದಿರುವ ಮಾಜಿ ಪ್ರಧಾನಿ ಮಂತ್ರಿ ಹೆಚ್. ಡಿ. ದೇವೇಗೌಡರಿಗೆ ಇಂದುಅವರಿಗೆ 91ನೇ ಹುಟ್ಟುಹಬ್ಬದ ಸಂಭ್ರಮ.

Join Our Whatsapp Group

ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕಂತಿ ಪರಂಪರೆಯ ಪ್ರಶಂಸಕರು.

ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀ ದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು.

ದೇಶದ ಪ್ರಧಾನಿಯಾಗುವ ಮೂಲಕ ಕರ್ನಾಟಕದ ಕೀರ್ತಿಯನ್ನ ದೇಶಕ್ಕೆ ಪರಿಚಯಿಸಿದ್ದ ದೇವೇಗೌಡರು. ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಹೆಚ್​ಡಿ ದೇವೇಗೌಡ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರಿಗೆ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ.

ಶುಭಾಶಯ ಕೋರಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಟ್ವಿಟ್​ ಮೂಲಕ ಶುಭಾಶಯ ಕೋರಿದ್ದು, ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ

ಟ್ವೀಟ್ ಮೂಲಕ ಶುಭಾಶಯ ಕೋರಿದ ಬಸವರಾಜ ಬೊಮ್ಮಾಯಿ ಅವರು ‘ಹಿರಿಯ ಮುತ್ಸದ್ಧಿ ನಾಯಕರು, ಮಾಜಿ ಪ್ರಧಾನ ಮಂತ್ರಿ ಶ್ರೀ ಹೆಚ್​.ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು, ಭಗವಂತನ ಕೃಪಾಶೀರ್ವಾದ ತಮ್ಮ ಮೇಲೆ ಸದಾ ಇರಲಿಯೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ

ಭಾರತದ 11ನೇ ಪ್ರಧಾನಮಂತ್ರಿಗಳು, ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್​ ಡಿ ದೇವೇಗೌಡ ಅವರಿಗೆ 91ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು ಹಾಗೂ ನನ್ನ ಭಕ್ತಿಪೂರ್ವಕ ಪ್ರಣಾಮಗಳು. ನನ್ನ ಶಕ್ತಿ, ಪ್ರೇರಣೆ, ದಾರಿದೀಪ ಆಗಿರುವ ಅವರು, ಪಕ್ಷದ ಪಾಲಿನ ಮಹಾನ್ ಚೈತನ್ಯ. ದೇಶ ಮತ್ತು ಕನ್ನಡನಾಡಿಗೆ ಅವರ ಕೊಡುಗೆ ಅವಿಸ್ಮರಣೀಯ. ಅವರ ಅನುಭವಧಾರೆ ನಮಗೆಲ್ಲ ಅಮೃತಧಾರೆ. ಆ ಭಗವಂತ ಶ್ರೀಯುತರಿಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಲಿ. ಅವರು ನಮ್ಮೆಲ್ಲರನ್ನು ಇನ್ನೂ ದೀರ್ಘಕಾಲ ಮುನ್ನಡೆಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಬಿ ಎಸ್​ ಯಡಿಯೂರಪ್ಪ

‘ಮುತ್ಸದ್ಧಿ ಹಿರಿಯ ರಾಜಕಾರಣಿಗಳು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಎಂ ಬಿ ಪಾಟೀಲ್​

‘ಹಿರಿಯ ಮುತ್ಸದ್ಧಿ , ಮಾಜಿ ಪ್ರಧಾನಮಂತ್ರಿಗಳಾದ, ಸನ್ಮಾನ್ಯ ಶ್ರೀ ಹೆಚ್​ಡಿ ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತನ ಅನುಗ್ರಹ ಸದಾ ಅವರ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ. ನಾಡು, ನುಡಿ, ನೆಲ, ಜಲದ ಬಗೆಗೆ ಅವರಿಗಿರುವ ಕಾಳಜಿ ಹಾಗೂ ಜವಾಬ್ದಾರಿಯುತ ನಡೆ ಎಲ್ಲರಿಗೂ ಮಾದರಿಯಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.