ತೀರ್ಥಹಳ್ಳಿ: ವಿಶ್ವ ಕರ್ಮ ಸಮುದಾಯ ಭವನದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜಣ್ಣ (58) ಬಂಧಿತ ಆರೋಪಿ.
ತೀರ್ಥಹಳ್ಳಿಯ ಕುರುವಳ್ಳಿ ಸಮೀಪ ನಿರ್ಮಾಣ ಹಂತದ ವಿಶ್ವಕರ್ಮ ಸಮುದಾಯ ಭವನದಲ್ಲಿ ಆರ್.ಬೀರೇಶ್ (46) ಮತ್ತು ಮಂಜಪ್ಪ (45) ಎಂಬುವವರ ಜೋಡಿ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.
ವಿಶ್ವ ಕರ್ಮ ಸಮುದಾಯ ಭವನ ನಿರ್ಮಾಣ ಕಾರ್ಯದಲ್ಲಿ ಮೂವರು ಕೆಲಸಗಾರರಾಗಿದ್ದರು. ಕಳೆದ ರಾತ್ರಿ ಮೂವರ ಮಧ್ಯೆ ಜಗಳವಾಗಿದ್ದು, ರಾಜಣ್ಣ, ಇಬ್ಬರನ್ನು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಜೋಡಿ ಕೊಲೆಯ ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತೀರ್ಥಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.