ಬೆಂಗಳೂರು: ನೋಟರಿ ವಕೀಲರನ್ನು ನೇಮಕ ಮಾಡಲು 50 ಸಾವಿರ ರೂ.ಲಂಚಕ್ಕೆ ಬೇಡಿಕೆಯಿಟ್ಟು, ಮುಂಗಡವಾಗಿ 25,000 ಪಡೆಯುತ್ತಿದ್ದ ಆರೋಪದಡಿ ಕಾನೂನು ಮತ್ತು ನ್ಯಾಯ ಸಚಿವಾಲಯದ ಕಾನೂನು ವ್ಯವಹಾರದ ವಿಭಾಗದ ಹೆಚ್ಚುವರಿ ಕಾನೂನು ಸಲಹೆಗಾರ ಟಿ.ಕೆ. ಮಲಿಕ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಕೇಂದ್ರ ಸರ್ಕಾರದ ನೋಟರಿ ನೇಮಕ ಮಾಡುವ ಜವಾಬ್ದಾರಿಯನ್ನು ಕಾನೂನು ವ್ಯವಹಾರ ವಿಭಾಗಕ್ಕೆ ನೀಡಲಾಗಿದೆ.
ಬೆಂಗಳೂರನ ಕಚೇರಿಯಲ್ಲಿ ಕೆಲಸ ಮಾಡುವ ಮಲಿಕ್, ಅಧಿಕಾರ ದುರುಪಯೋಗಪಡಿಸಿಕೊಂಡು ಲಂಚ ಪಡೆದು ನೋಟರಿ ನೀಡುತ್ತಿದ್ದ. ಇದಕ್ಕೆ ಸಹಕರಿಸುತ್ತಿದ್ದ ಬೆಂಗಳೂರಿನ ವಕೀಲರಾದ ಜಿ.ಕೆ. ವಾಣಿ ಎಂಬುವವರನ್ನೂ ಸೆರೆ ಹಿಡಿಯಲಾಗಿದೆ. ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಸಿಬಿಐ ಮೂಲಗಳು ಹೇಳಿವೆ.
₹ 25,000 ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ಮಾಡಿ ಮಲಿಕ್ನನ್ನು ಬಂಧಿಸಲಾಗಿದೆ. ಇದೇ ವೇಳೆ ಈತನ ಬಳಿ ₹ 4.32 ಲಕ್ಷ ನಗದು ಸಿಕ್ಕಿದ್ದು, ಅದು ಸಹ ಲಂಚದ ಹಣವಿರುವ ಮಾಹಿತಿ ಇದೆ. ಜೊತೆಗೆ, ಬೆಂಗಳೂರು ಹಾಗೂ ಗಾಜಿಯಾದಾಬ್ನಲ್ಲಿರುವ ಆರೋಪಿಗೆ ಸೇರಿದ್ದ ಎರಡು ಸ್ಥಳಗಳ ಮೇಲೂ ದಾಳಿ ಮಾಡಿ, ₹ 34 ಲಕ್ಷ ಜಪ್ತಿ ಮಾಡಲಾಗಿದೆ. ಆರೋಪಿ ನೀಡಿದ್ದ ಮಾಹಿತಿಯಂತೆ ಬೆಂಗಳೂರಿನಲ್ಲಿ ವಾಣಿ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹತ್ವದ ಪ್ರಕರಣಗಳಲ್ಲಿ ಎದುರಾಳಿ ವಕೀಲರ ಜೊತೆಗೂ ಮಲಿಕ್ ಒಡನಾಟವಿಟ್ಟುಕೊಂಡು, ಪ್ರಕರಣ ಗೆಲ್ಲಲು ಸಹಕಾರ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ದೇಶದ ಹಲವು ರಾಜ್ಯಗಳ ವಕೀಲರಿಗೆ ಅಕ್ರಮವಾಗಿ ನೋಟರಿ ನೀಡಿರುವ ಸಂಶಯವೂ ಇದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.