ಬೆಂಗಳೂರು : ಮೇ 20 ರಂದು ನಡೆಯಲಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಘಟಾನುಘಾಟಿ ನಾಯಕರಿಗೆ ಆಹ್ವಾನ ನೀಡಲಾಗಿದೆ.
ಮುಖ್ಯವಾಗಿ ಮಹಾಘಟಬಂಧನದ ನಾಯಕರೆಲ್ಲರೂ ಕೂಡಾ ಆಗಮಿಸುವ ಸಾಧ್ಯತೆಗಳಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಒಗ್ಗಟ್ಟಿನ ಸಂದೇಶವನ್ನು ನೀಡಲಿದ್ದಾರೆ ಎನ್ನಲಾಗಿದೆ.
ಶನಿವಾರ ಅಂದ್ರೆ ಮೇ 20 ರಂದು ಮದ್ಯಾಹ್ನ 12:30ಕ್ಕೆ ಸಿದ್ದು ಹಾಗೂ ಡಿಕೆಶಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ ಬರಲಿದ್ದಾರೆ.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಆಗಮನ
ಕಾಂಗ್ರೆಸ್, ಜೆಡಿಯು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮುಖ ಸಚಿವರು ಆಗಮಿಸಲಿದ್ದಾರೆ. ಈಗಾಗಲೇ ಬಿಹಾರ ಸಿಎಂ ನಿತೀಶ್ ಕುಮಾರ್, ಛತ್ತೀಸ್‌ಘಡ ಸಿಎಂ ಭೂಪೇಶ್ ಬಘೇಲ್, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಜೊತೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಅವರು ಕೂಡಾ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.