ಮನೆ ರಾಜ್ಯ ಪ್ರಮಾಣ ವಚನ ಸ್ವೀಕಾರ: ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ

ಪ್ರಮಾಣ ವಚನ ಸ್ವೀಕಾರ: ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ತಗಡೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಶೇಷ ಪೂಜೆ

0

ತಾಂಡವಪುರ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನ ಗೆಲ್ಲಿಸುವ ಮೂಲಕ ರಾಜ್ಯದ ಜನತೆ ನಿಚ್ಚಳ ಬಹುಮತ ನೀಡಿದ ಹಿನ್ನೆಲೆಯಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿ ಯಾಗಿ ಎರಡನೇ ಬಾರಿಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದು, ಜೊತೆಗೆ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದಾರೆ.

Join Our Whatsapp Group

ಇಂದು ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗಸ್ವಾಮಿ ಹಾಗೂ ಶ್ರೀಕಂಠೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಹೆಜ್ಜಿಗೆ ಇಂದಿನ ಬಾಬು ರವರ ನೇತೃತ್ವದಲ್ಲಿ ದಕ್ಷಿಣ ಕಾಶಿ ಎಂದು ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ತಗಡೂರು ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ತೆರಳಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ವಿಷಕಂಠ ಶ್ರೀಕಂಠ ಸ್ವಾಮಿ ಹಾಗೂ ತಾಯಿ ಚಾಮುಂಡೇಶ್ವರಿ ದೇವಿಯವರು ಆಯಸ್ಸು ಆಯುರ್ ಆರೋಗ್ಯ ಹಾಗೂ ರಾಜ್ಯ ಸರ್ಕಾರವನ್ನು ಉತ್ತಮವಾಗಿ ನಡೆಸುವ ಶಕ್ತಿಯನ್ನು ಕರುಣಿಸಲಿ ಎಂದು ದೇವರಲ್ಲಿ ಮುಖಂಡರು ಪ್ರಾರ್ಥನೆ ಸಲ್ಲಿಸಿ ಶುಭ ಕೋರಿದರು.

ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಅಧಿಕಾರ ನಡೆಸಿ ಅನುಭವ ಇರುವುದರಿಂದ ಮತ್ತೆ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿಕೊಂಡು ರಾಜ್ಯದ ಅಭಿವೃದ್ಧಿ ಕಡೆಗೆ ಹೆಚ್ಚು ಗಮನ ಕೊಡುವ ಮೂಲಕ ಕಾಂಗ್ರೆಸ್ ಪಕ್ಷವು ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ವಿಶ್ವಾಸ ಇದೆ ಎಂದು ಮುಖಂಡರು ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ದಲಿತ ಯುವ ನಾಯಕ ಹೆಚ್ಚಿಗೆ ಇಂಧನ ಬಾಬು, ಚಿನ್ನಂಬಳ್ಳಿ ಆರ್ ಮಹದೇವ್, ಸುತ್ತೂರು ಸೋಮಣ್ಣ, ರವಿನಗರಲೆ ನಾರಾಯಣಾಯ್ಕ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಕೆಂಪಣ್ಣ, ಕೆಬಿ ಸ್ವಾಮಿ, ಗಿರೀಶ್, ಎಪಿಎಂಸಿ ಮಾಜಿ ಉಪಾಧ್ಯಕ್ಷ ತಗಡೂರು ಆರ್ ಮಹದೇವ್, ಬೊಕ್ಕಹಳ್ಳಿ ಸೋಮಸುಂದರ್ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಿ ಬಿಪಿ ಮಹದೇವ್ ಹಾರೋಪುರ ಶಿವಣ್ಣ ಬೆಳಗಲಿ ಪುರುಷೋತ್ತಮ್ ಜಗದೀಶ್ ಕುಮಾರ ಕಿರುಗುಂದ ಶಿವ ನಾಗ ಮಲ್ಲಿಪುರ ಪ್ರಕಾಶ್ ಮಹದೇವಸ್ವಾಮಿ ಕಲ್ಬಳ್ಳಿ ಸುರೇಶ್ ಬಾಬು ಸೇರಿದಂತೆ ಇತರರು ಉಪಸ್ಥಿತರಿದ್ದರು.